Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ...

ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ತಲ್ಲೂರು

ವಾರ್ತಾಭಾರತಿವಾರ್ತಾಭಾರತಿ13 April 2025 5:06 PM IST
share
ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ತಲ್ಲೂರು

ಉಡುಪಿ, ಎ.13: ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಅವರಲ್ಲಿ ವಾಕ್ಚಾತುರ್ಯ, ಅಭಿನಯ, ನೃತ್ಯ, ಪೌರಾಣಿಕ ಪ್ರಸಂಗಗಳ ಬಗ್ಗೆ ಜ್ಞಾನವುಂಟಾಗುವುದಲ್ಲದೆ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣ ವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಹಂಗಾರಕಟ್ಟೆ -ಐರೋಡಿ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾದ 20 ದಿನಗಳ ಮಕ್ಕಳಿಗೆ ಯಕ್ಷಗಾನ ನೃತ್ಯ, ಅಭಿನಯ ತರಬೇತಿ ಶಿಬಿರವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯಕ್ಷಗಾನ ಕಲಿಕೆ ಕೇವಲ ಕಲಾವಿದನಾಗಲು ಅಲ್ಲ, ಒಬ್ಬ ಉತ್ತಮ ಪ್ರೇಕ್ಷಕನಾಗಲು ಸಾಧ್ಯವಾಗುತ್ತದೆ. ದೈಹಿಕವಾಗಿ ಆರೋಗ್ಯದ ಜೊತೆಗೆ ಮನಸ್ಸಿಗೂ ಶಾಂತಿ, ನೆಮ್ಮದಿ ಲಭಿಸುತ್ತದೆ. ಹೀಗಾಗಿ ಮಕ್ಕಳಿಗೆ ಯಕ್ಷಗಾನ ಶಿಕ್ಷಣವನ್ನು ನೀಡಲು ಪೋಷಕರು ಹಿಂದೇಟು ಹಾಕಬಾರದು. ಯಕ್ಷಗಾನವನ್ನು ಅಭ್ಯಾಸ ಮಾಡಿದ ಮಕ್ಕಳು ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ಮಾಡಿರುವುದನ್ನು ನಾವು ಗಮನಿಸಿದ್ದೇವೆ ಎಂದರು.

ಯಕ್ಷಗಾನದಲ್ಲಿ ಅಭಿನಯ, ಮಾತುಗಾರಿಕೆ, ಕುಣಿತ, ಹಿಮ್ಮೇಳದಲ್ಲಿ ಭಾಗವತಿಕೆ, ಚೆಂಡೆ, ಮದ್ದಳೆಯ ಸಂಗೀತ, ವೇಷಭೂಷಣದ ಸೊಗಸಿದೆ. ಮಕ್ಕಳ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬೆಳವಣಿಗೆಗೆ ಬೇಕಾದ ಎಲ್ಲಾ ಅಂಶಗಳು ಈ ಕಲೆಯಲ್ಲಿವೆ. ಜೀವನದಲ್ಲಿ ಶಿಸ್ತು ಬದ್ಧ ಜೀವನ ನಡೆಸಲು ಸಹಕಾರಿ ಯಾಗುತ್ತದೆ. ಶುದ್ಧ ಕನ್ನಡ ಮಾತನಾಡುವ ಏಕೈಕ ಕಲೆ ಅಂದರೆ ಅದು ಯಕ್ಷಗಾನ ಮಾತ್ರ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಯಕ್ಷಗಾನ ಕೇಂದ್ರದ ಅಧ್ಯಕ್ಷರು ಹಾಗೂ ಉದ್ಯಮಿ ಆನಂದ ಸಿ.ಕುಂದರ್ ಮಾತನಾಡಿ, ಇಂದು ಯಕ್ಷಗಾನ ಕಲಾವಿದರಿಗೆ ಉತ್ತಮ ಸಂಭಾವನೆ ದೊರಕುತ್ತಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಕಲಿತರೆ ಜೀವನೋಪಾಯಕ್ಕೂ ದಾರಿಯಾಗುತ್ತದೆ. ಆದ್ದರಿಂದ ಯಕ್ಷಗಾನದ ಬಗ್ಗೆ ಕೀಳರಿಮೆ ಬೇಡ. ಈ ರಂಗದಲ್ಲಿ ಉನ್ನತಿಗೇರುವ ವಿಫುಲ ಅವಕಾಶವಿದೆ ಎಂದು ಅಭಿಪ್ರಾಯಪಟ್ಟರು.

ಯಕ್ಷಗಾನ ಗುರು, ಶಿಬಿರದ ನಿರ್ದೇಶಕ ಕೆ.ಸದಾನಂದ ಐತಾಳ್ ಮಾತನಾಡಿ, ಯಕ್ಷಗಾನದಲ್ಲಿ ಮಕ್ಕಳ ಭಾವನೆಗಳನ್ನು ನಕರತಾತ್ಮಕವಾಗಿ ಕೆರಳಿಸುವ ಅಂಶಗಳೇ ಇಲ್ಲ. ಇಲ್ಲಿ ಮಕ್ಕಳ ಭಾವನೆಗಳನ್ನು ಅರಳಿಸುವ, ಅವರ ವಿಕಸನಕ್ಕೆ ಕಾರಣವಾಗುವ ಅಂಶಗಳೇ ಹೆಚ್ಚಿವೆ. ಹೀಗಾಗಿ ಪ್ರತೀ ಕುಟುಂಬದಲ್ಲಿ ಒಬ್ಬರಾದರೂ ಯಕ್ಷಗಾನವನ್ನು ಕಲಿಯಲೇ ಬೇಕು ಎಂದರು.

ಯಕ್ಷಗಾನ ಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟೇಶ್ವರದ ಗೀತಾ ಎಚ್‌ಎಸ್‌ಎನ್ ಫೌಂಡೇಶನ್‌ನ ಅಧ್ಯಕ್ಷ ಶಂಕರ ಐತಾಳ್ ಅಮಾಸೆಬೈಲು ಉಪಸ್ಥಿತರಿದ್ದರು. ಈ ಯಕ್ಷಗಾನ ತರಬೇತಿ ಶಿಬಿರ ಎ.13ರಿಂದ ಮೇ 3ರವರೆಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X