Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿರುಗಾಳಿ ಸಹಿತ ಮಳೆಗೆ ನಲುಗಿದ ಉಡುಪಿ...

ಬಿರುಗಾಳಿ ಸಹಿತ ಮಳೆಗೆ ನಲುಗಿದ ಉಡುಪಿ ಜಿಲ್ಲೆ; ನೂರಾರು ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ15 April 2025 7:00 PM IST
share
ಬಿರುಗಾಳಿ ಸಹಿತ ಮಳೆಗೆ ನಲುಗಿದ ಉಡುಪಿ ಜಿಲ್ಲೆ; ನೂರಾರು ಮನೆಗಳಿಗೆ ಹಾನಿ

ಉಡುಪಿ, ಎ.15: ಸೋಮವಾರ ಸಂಜೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಸುರಿದ ಮಳೆಗೆ ಉಡುಪಿ ಜಿಲ್ಲೆ ಅಕ್ಷರಶ: ನಲುಗಿಹೋಯಿತು. ಯಾವುದೇ ಮುನ್ಸೂಚನೆ ಇಲ್ಲದೆ ನಾಲ್ಕು ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿ ನೂರಾರು ಮರಗಳನ್ನು ಧರಾಶಾಹಿಗೊಳಿತಲ್ಲದೇ, ತೋಟಗಾರಿಕಾ ಬೆಳೆಗಳಿಗೆ ಅಪಾರ ಹಾನಿಯನ್ನುಂಟು ಮಾಡಿದೆ. ನೂರಾರು ಮನೆಗಳಿಗೂ ಹಾನಿಯಾದ ಮಾಹಿತಿ ಇದೆ.

ಜಿಲ್ಲೆಯಾದ್ಯಂತ ಸಾವಿರಾರು ಅಡಿಕೆ, ತೆಂಗು, ಬಾಳೆ ಗಿಡಗಳು ಬುಡಸಮೇತ ನೆಲಕ್ಕೊರಗಿದ್ದು, ರೈತರು ಕಂಗಾಲಾಗುವಂತೆ ಮಾಡಿದೆ. 50ಕ್ಕೂ ಅಧಿಕ ಮನೆಗಳಿಗೆ ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ವರದಿಗಳು ಬಂದಿವೆ. ಸುರಿದ ಮಳೆಯ ಪ್ರಮಾಣ ಕಡಿಮೆ ಇದ್ದರೂ, ಬಿರುಗಾಳಿಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ಪ್ರಾಕೃತಿಕ ಸಂಪತ್ತು, ವಿವಿಧ ಬಗೆಯ ಸೊತ್ತುಗಳು ಹಾನಿಗೊಳಗಾಗಿವೆ.

ಬಿರುಗಾಳಿಯಿಂದಾಗಿ ರಸ್ತೆ ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಅಪಾರ ಪ್ರಮಾಣದ ಧೂಳು ನೆಲದಿಂದ ಮೇಲ ಕ್ಕೆದ್ದು ಜನರನ್ನು ಕಂಗಾಲುಗೊಳಿಸಿತು. ಇದರಿಂದಾಗಿ ರಸ್ತೆಯಲ್ಲಿ ಸಂಚಾರವೂ ಅಸ್ತವ್ಯಸ್ತಗೊಳ್ಳುವಂತಾ ಯಿತು. ಆಕಾಶದುದ್ದಕ್ಕೂ ತರಗೆಲೆಗಳು ಹಾರಾಡುವ ಅಪರೂಪದ ದೃಶ್ಯವನ್ನೂ ಹಲವು ಕಡೆಗಳಲ್ಲಿ ಜನರು ಕಾಣುವಂತಾಯಿತು.

ಇದರಿಂದಾಗಿ ಅನೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿತು. ಭಾರೀ ಸಂಖ್ಯೆಯಲ್ಲಿ ದೊಡ್ಡ ದೊಡ್ಡ ಗಾತ್ರದ ಮರಗಳು ನೆಲಕ್ಕುರುಳಿದ್ದರಿಂದ ನೂರಾರು ಸಂಖ್ಯೆಯಲ್ಲಿ ವಿದ್ಯುತ್ ಕಂಬಗಳೂ ನೆಲವನ್ನ ಪಿದ್ದು, ವಿದ್ಯುತ್ ಸಂಪರ್ಕವನ್ನು ಮರು ಸ್ಥಾಪಿಸಲು ಮೆಸ್ಕಾಂನ ಸಿಬ್ಬಂದಿಗಳು ಹರಸಾಹಸ ಪಡಬೇಕಾ ಯಿತು. ಇದರಿಂದಾಗಿ ಹೆಚ್ಚಿನ ಕಡೆಗಳಲ್ಲಿ ತಡರಾತ್ರಿಯ ಬಳಿಕವೇ ವಿದ್ಯುತ್ ಸಂಪರ್ಕ ಮರು ಸ್ಥಾಪನೆಗೊಂಡವು.

ಜಿಲ್ಲೆಯ ಕುಂದಾಪುರ, ಕಾಪು, ಬ್ರಹ್ಮಾವರ, ಕಾರ್ಕಳ, ಉಡುಪಿ, ಹೆಬ್ರಿ ಹೀಗೆ ಎಲ್ಲಾ ತಾಲೂಕುಗಳಿಂದಲೂ ಸೋಮವಾರ ಸಂಜೆಯ ಬಿರುಗಾಳಿ- ಮಳೆಗೆ ಮನೆಗಳು ಸೇರಿದಂತೆ, ಕೃಷಿಗೆ, ತೋಟಗಾರಿಕಾ ಬೆಳೆಗ ಳಿಗೆ ಲಕ್ಷಾಂತರ ರೂ. ಹಾನಿ ಸಂಭವಿಸಿರುವ ಮಾಹಿತಿಗಳು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ನಿಯಂತ್ರಣ ಕೇಂದ್ರಕ್ಕೆ ಬಂದಿವೆ.

ಉಡುಪಿ ಮತ್ತು ಕುಂದಾಪುರ ತಾಲೂಕುಗಳಿಂದ ಅತೀ ಹೆಚ್ಚಿನ ಹಾನಿಯ ವರದಿಗಳು ಬಂದಿವೆ. ಇವುಗಳಲ್ಲಿ ಉಡುಪಿ ತಾಲೂಕಿನ ಕೊಡವೂರಿನ ಸದಾನಂದ ಪೂಜಾರಿ ಹಾಗೂ ಪಾಂಡುರಂಗ ಎಂಬವರ ಆರ್‌ಸಿಸಿ ಮನೆಗಳ ಮೇಲೆ ಭಾರೀ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿಗೊಳಗಾಗಿವೆ. ಕಾಪು ತಾಲೂಕು ಶಿರ್ವದ ಪದ್ಮ ಪೂಜಾರಿ ಅವರ ಮನೆಯೂ ಗಾಳಿ- ಮಳೆಯಿಂದ ಸಂಪೂರ್ಣ ಹಾನಿಗೊಂಡ ವರದಿ ಬಂದಿದೆ.

ಹಿರಿಯಡ್ಕ ಸಮೀಪ ಹಾಳು ಉಗ್ಗೆಲ್ ಕೊಪ್ಪಳ ಸಮೀಪ ಇಂದಿರಾ ಸೇರಿಗಾರ್ತಿ ಎಂಬವರಿಗೆ ಸೇರಿದ ಮನೆಯ ಸಿಮೆಂಟ್ ಶೀಟ್‌ಗಳು, ವಿದ್ಯುತ್ ಕಂಬದ ವಯರ್ ಎಲ್ಲವೂ ಬೀಸಿದ ಸುಂಟರಗಾಳಿಗೆ ಹಾರಿ ಹೋಗಿವೆ. ಅಂದಾಜು ಸುಮಾರು ಮೂರು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿ ರುವುದಾಗಿ ಮನೆಯವರು ತಿಳಿಸಿದ್ದಾರೆ.

ಉಡುಪಿ ರಾಜಾಂಗಣ ಸಮೀಪದ ಕಡಿಯಾಳಿ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬೃಹತ್ ಗಾತ್ರದ ಆಲದ ಮರವೊಂದು ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಗೊಂಡಿದೆ. ಮನೆಯೊಳಗಿದ್ದ ದಂಪತಿಗಳಾದ ರಾಘವೇಂದ್ರ ಭಟ್ (60) ಹಾಗೂ ನೀರಜಾ ಭಟ್ (49) ಗಾಯ ಗೊಂಡಿದ್ದು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಸಂಪೂರ್ಣ ಜಖಂಗೊಂಡಿದ್ದು ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ 6.7ಮಿ.ಮೀ. ಮಳೆ: ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಸರಾಸರಿ 6.7ಮಿ.ಮೀ. ಮಳೆ ಬಿದ್ದಿದೆ. ಕಾರ್ಕಳದಲ್ಲಿ ಅತ್ಯಧಿಕ 14.3ಮಿ.ಮೀ, ಹೆಬ್ರಿಯಲ್ಲಿ 12.8, ಬ್ರಹ್ಮಾವರ ಹಾಗೂ ಕಾಪುವಿನಲ್ಲಿ ತಲಾ 6.8, ಉಡುಪಿಯಲ್ಲಿ 4.6ಮಿ.ಮೀ. ಮಳೆಯಾದ ಮಾಹಿತಿ ಇದೆ.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X