Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಾನಪದ ತಜ್ಞ ಪ್ರೊ.ಹಿ.ಚಿ....

ಜಾನಪದ ತಜ್ಞ ಪ್ರೊ.ಹಿ.ಚಿ. ಬೋರಲಿಂಗಯ್ಯರಿಗೆ ಜಾನಪದ ರತ್ನ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ15 April 2025 8:51 PM IST
share
ಜಾನಪದ ತಜ್ಞ ಪ್ರೊ.ಹಿ.ಚಿ. ಬೋರಲಿಂಗಯ್ಯರಿಗೆ ಜಾನಪದ ರತ್ನ ಪ್ರಶಸ್ತಿ

ಉಡುಪಿ, ಎ.15: ಬಯಲು ಸೀಮೆಯ ಮೂಡಲಪಾಯ, ಉತ್ತರ ಕರ್ನಾಟಕದ ಶ್ರೀಕೃಷ್ಣ ಪಾರಿಜಾತಾ ಮೊದಲಾದ ಕಲಾಪ್ರಕಾರಗಳು ಸೂಕ್ತ ಪ್ರೋತ್ಸಾಹವಿಲ್ಲದೆ ಅಳಿವಿನಂಚಿನಲ್ಲಿವೆ. ಆದರೆ ಕರಾವಳಿಯ ಯಕ್ಷಗಾನ ಇಂದು ವಿಶ್ವದರ್ಜೆಯ ಕಲೆಯಾಗಿ ಮೆರೆಯುವಂತೆ ಮಾಡಿದ ಇಲ್ಲಿನ ವಿದ್ಯಾವಂತರು, ಕಲಾ ಪ್ರೋತ್ಸಾಹಕರು ಅಭಿನಂದನಾರ್ಹರು ಎಂದು ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಹೇಳಿದ್ದಾರೆ.

ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಮಕ್ಕಳ ಮಂಟಪದಲ್ಲಿ ಭೂಮಿಕಾ ಹಾರಾಡಿ, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಸಹಭಾಗಿತ್ವದಲ್ಲಿ ನಡೆಯುತ್ತಿರುವ ‘ಬಣ್ಣ 11’ ಪಂಚದಿನ ನಾಟಕೋ ತ್ಸವದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕೊಡ ಮಾಡುವ 2025ನೇ ಸಾಲಿನ ’ತಲ್ಲೂರ್ಸ್ ಜಾನಪದ ರತ್ನ ಪ್ರಶಸ್ತಿ’ಯನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.

ಬಯಲು ಸೀಮೆಯಲ್ಲಿ ಇಲ್ಲಿನ ಯಕ್ಷಗಾನದಂತೆ ಮೂಡಲಪಾಯ ಯಕ್ಷಗಾನವಿತ್ತು. ಆದರೆ ಅದು ಇಂದು ಬಹುತೇಕ ಅಳಿವಿನಂಚಿನಲ್ಲಿದೆ. ಉತ್ತರ ಕರ್ನಾಟಕದ ಶ್ರೀಕೃಷ್ಣ ಪಾರಿಜಾತ ಕೂಡಾ ನಾಮವಶೇಷವಾಗಿ ಹೋಗಿದೆ. ಆದರೆ ಕರಾವಳಿಯಲ್ಲಿ ಯಕ್ಷಗಾನವನ್ನು ವಿಶ್ವದರ್ಜೆಯ ಪ್ರಮುಖ ಕಲೆ ಎಂದು ವಿಶ್ವದಾದ್ಯಂತ ಪರಿಗಣಿಸುವ ಹಾಗೆ ಕರಾವಳಿಯ ಜನತೆ ಮಾಡಿದ್ದಾರೆ. ಆದಕ್ಕೆ ಕಾರಣ ಇಲ್ಲಿನ ವಿದ್ಯಾವಂತರು ಆಸಕ್ತಿಯಿಂದ ಕಲೆಗೆ ಪ್ರವೇಶ ಮಾಡಿರುವುದು ಎಂದು ಪ್ರೊ.ಬೋರಲಿಂಗಯ್ಯ ಅಭಿಪ್ರಾಯ ಪಟ್ಟರು.

ಕರಾವಳಿ ಸೊಗಡು: ಕರಾವಳಿಯ ಸಂಪ್ರದಾಯದಂತೆ ಅಕ್ಕಿಮುಡಿ, ಬಾಳೆಗೊನೆ, ಅಡಿಕೆಗೊನೆ, ಸಿಯಾಳಗೊನೆ, ಹಿಂಗಾರ, ವೀಳ್ಯದೆಲೆ ನೀಡಿ, ಬೆಳ್ಳಿಯ ಪ್ರಶಸ್ತಿ ಫಲಕದೊಂದಿಗೆ ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರಿಗೆ ತಲ್ಲೂರ್ಸ್ ಜಾನಪದ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಭೂಮಿಕಾ ಹಾರಾಡಿ ಸಹಕಾರದಲ್ಲಿ ಪ್ರತೀ ವರ್ಷ ಬಣ್ಣ ನಾಟಕೋತ್ಸವದಲ್ಲಿ ಜಾನಪದ ಪರಿಷತ್ತಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಸಲ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಹಿ.ಚಿ. ಬೋರಲಿಂಗಯ್ಯರಿಗೆ ಈ ಜಾನಪದ ಗೌರವ ನೀಡುತ್ತಿರುವುದು ಸಂತೋಷ ತಂದಿದೆ ಎಂದರು.

ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ರೋಟರಿ ಕ್ಲಬ್‌ನ ಜ್ಞಾನವಸಂತ ಶೆಟ್ಟಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಾನಪದ ಪರಿಷತ್ತಿನ ಕಾರ್ಯದರ್ಶಿ ರವಿರಾಜ ನಾಯಕ್, ಸಂಘಟನಾ ಕಾರ್ಯದರ್ಶಿ ಗೋಪಾಲ ಸಿ.ಬಂಗೇರ, ಖಜಾಂಚಿ ಪ್ರಶಾಂತ್ ಭಂಡಾರಿ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ, ರೋಟರಿ ಸಹಾಯಕ ಗವರ್ನರ್ ಆರ್.ಎಂ.ಸಾಮಗ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್‌ನ ಗಿರಿಜಾ ಶಿವರಾಮ ಶೆಟ್ಟಿ, ತಲ್ಲೂರು ಶಿವಪ್ರಸಾದ್ ಶೆಟ್ಟಿ, ಅನುಷಾ ಆಚಾರ್ಯ ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಪರಿಷತ್ ಕಾರ್ಯದರ್ಶಿ ರವಿರಾಜ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರೆ, ಭೂಮಿಕಾ ಹಾರಾಡಿ ಸಂಸ್ಥೆಯ ರವಿ ಎಸ್. ಪೂಜಾರಿ ಸ್ವಾಗತಿಸಿದರು. ಅಧ್ಯಕ್ಷ ರಾಮ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X