ದೈವಸ್ಥಾನದ ಕಾಣಿಕೆ ಡಬ್ಬಿ ಕಳವು

ಮಲ್ಪೆ : ದೇವರಬೆಟ್ಟುವಿನ ಪಾಳೆಕಟ್ಟೆ ಶ್ರೀಬಬ್ಬುಸ್ವಾಮಿ ದೈವಸ್ಥಾನಕ್ಕೆ ಎ.19ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿನ ಹಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ದೈವಸ್ಥಾನದ ಆವರಣ ಗೋಡೆಯ ಹೊರ ಭಾಗರದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಕಳ್ಳರು ಹೊಡೆದು ಅದರಲ್ಲಿದ್ದ ಸುಮಾರು 15000ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





