Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆಲವೊಂದು ಗ್ರಾಪಂಗಳಲ್ಲಿ ಕುಡಿಯುವ ನೀರಿನ...

ಕೆಲವೊಂದು ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಸಕ ಕೊಡ್ಗಿ

ವಾರ್ತಾಭಾರತಿವಾರ್ತಾಭಾರತಿ23 April 2025 7:49 PM IST
share
ಕೆಲವೊಂದು ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಸಕ ಕೊಡ್ಗಿ

ಕುಂದಾಪುರ, ಎ.23: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೆಲವೊಂದು ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಯಾವುದೇ ಗ್ರಾಪಂಗಳಲ್ಲಿ ಗಂಭೀರವಾದ ಕುಡಿಯುವ ನೀರಿನ ಸಮಸ್ಯೆ ಈವರೆಗೆ ಕಂಡುಬಂದಿಲ್ಲ. ಆದರೂ ಸ್ಥಳೀಯಾಡಳಿತ ಮುಂಜಾಗ್ರತೆ ವಹಿಸಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪದ ಮುಂಜಾ ಗ್ರತ ಕ್ರಮದ ಕುರಿತು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಳೆಗಾಲದಲ್ಲಿ ಅಪಾಯಕಾರಿ ಮರದ ಗೆಲ್ಲುಗಳನ್ನು ಕಟಾವು ಮಾಡಲು ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಸಮನ್ವತೆ ಸಾಧಿಸಿ ಜನರಿಗೆ ತೊಂದರೆ ಆಗದಂತೆ ಕ್ರಮಕೈಗೊಳ್ಳಬೇಕೆಂದು ಎಂದವರು ಹೇಳಿದರು.

ಕೋಟೇಶ್ವರ ಗ್ರಾಪಂ ವ್ಯಾಪ್ತಿಯ 15 ಮನೆಗಳಿಗೆ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡಲಾ ಗುತ್ತಿದ್ದು, ಬೋರ್‌ವೆಲ್‌ನಲ್ಲಿ ನೀರು ಬತ್ತಿ ಹೋಗಿದೆ. ಯಾವುದೇ ಖಾಸಗಿ ಜಲಮೂಲ ಇಲ್ಲದಿರುವುದರಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಕೋಟೇಶ್ವರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹೇಳಿದರು.

ಗೋಪಾಡಿಯಲ್ಲಿ ಗೇಟ್‌ವಾಲ್‌ನಲ್ಲಿ ನೀರು ಸೋರಿಕೆಯಾಗುತ್ತಿದೆ. ಕುಡಿಯುವ ನೀರು ಪೂರೈಕೆ ಮಾಡುವ ಎರಡು ಪ್ರಮುಖ ಬಾವಿಗಳಲ್ಲಿ ಒಂದು ಬಾವಿಯಲ್ಲಿ ನೀರು ಬತ್ತಿ ಹೋಗಿದೆ. ವಾರಾಹಿ ನೀರು ಬಿಟ್ಟಿರುವುದ ರಿಂದ ಅಷ್ಟೊಂದು ಸಮಸ್ಯೆ ಇಲ್ಲ ಎಂದು ಗೋಪಾಡಿ ಗ್ರಾಪಂ ಅಧ್ಯಕ್ಷರು ತಿಳಿಸಿದರು. ಗ್ರಾಪಂ.ನ 15ನೇ ಹಣಕಾಸು ಯೋಜನೆಯಡಿ ಉಳಿಕೆ ಹಣವನ್ನು ಕುಡಿಯುವ ನೀರಿನ ವ್ಯವಸ್ಥೆಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಮತ್ತು ಶುದ್ಧ ನೀರು ಸರಬರಾಜು ಮಾಡಲು ಫಿಲ್ಟರ್ ಅಳವಡಿಸುವಂತೆ ಮನವಿ ಮಾಡಿದರು.

ಕೊರ್ಗಿಯಲ್ಲಿ ಬಾವಿಯಲ್ಲಿ ಕೆಂಪು ನೀರು ಬರುತ್ತಿದೆ. ಹೀಗಾಗಿ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸಮಸ್ಯೆಯಾಗುತ್ತಿದೆ. ಸಾಗಿನಗುಡ್ಡೆ ಎಂಬಲ್ಲಿರುವ ಬಾವಿ ಕೂಡ ಬತ್ತಿ ಹೋಗಿದೆ. ಎರಡು ದಿನಕ್ಕೊಮ್ಮೆ 2-2 ಕೊಡಪಾನ ನೀರು ಸಿಗುತ್ತಿದೆ. ಕೊಳಕು ನೀರು ಶುದ್ಧೀಕರಿಸಲು ಫಿಲ್ಟರ್ ಅಳವಡಿಸು ವಂತೆ ಕೊರ್ಗಿ ಗ್ರಾಪಂ ಅಧಿಕಾರಿ ತಿಳಿಸಿದರು.

ಮೊಳಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಎರಡು ಟ್ಯಾಂಕ್‌ಗಳಿಗೆ ಒಂದೇ ಪೈಪ್‌ಲೈನ್ ಮೂಲಕ ನೀರು ಹಾಯಿಸ ಲಾಗುತ್ತಿದ್ದು, ಹೊಸ ಪೈಪ್‌ಲೈನ್ ಅವಶ್ಯಕತೆ ಇದೆ ಎಂದು ಗ್ರಾಪಂ ಅಧಿಕಾರಿ ಹೇಳಿದರು. ಹೆಂಗವಳ್ಳಿ ಗ್ರಾಪಂ.ನಲ್ಲಿ 150 ಮನೆಗಳಿಗೆ ಪೈಪ್‌ಲೈನ್ ಅಳವಡಿಸದೇ ಇರುವುದರಿಂದ ನೀರು ಕೊಡಲು ಆಗುತ್ತಿಲ್ಲ. ಬೋರ್‌ವೆಲ್ ತೆಗೆದರೆ ಯಾವುದೇ ಪ್ರಯೋಜನ ಇಲ್ಲ ಎಂದು ಗ್ರಾಪಂ ಅಧಿಕಾರಿ ಹೇಳಿದರು.

ಅಮಾಸೆಬೈಲ್ ಜಡ್ಡಿನಗದ್ದೆ ಎಂಬಲ್ಲಿ ನೀರಿನ ಮೂಲವೇ ಇಲ್ಲ ಎಂದು ಬೆಳ್ವೆ ಗ್ರಾಮದ ಗುಡ್ಡೆಮೇಲೆ ಇರುವ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಯಾಗಬಹುದು ಎಂದು, ಹಂದಟ್ಟು ಭಾಗದಲ್ಲಿ ವಾರಾಹಿಯವರು ಅರ್ಧಂಬರ್ಧ ಕೆಲಸ ಮಾಡಿದ್ದಾರೆ, ಕೆಂಪು ನೀರಿನ ಸಮಸ್ಯೆ ಇರುವುದರಿಂದ ಫಿಲ್ಟರ್ ಅಳವಡಿಸಬೇಕು ಎಂದು ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳು ಮಾಹಿತಿ ನೀಡಿದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಪಂಗಳಲ್ಲಿ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪಗಳ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮೆಸ್ಕಾಂ, ಅರಣ್ಯ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಂದಾಪುರ ತಹಶೀಲ್ದಾರ್ ಪ್ರದೀಪ ಕುರ್ಡೇಕರ್, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಪ್ರಸಾದ್, ಕುಂದಾಪುರ ತಾಪಂ ಇಒ ಡಾ.ರವಿಕುಮಾರ್ ಹುಕ್ಕೇರಿ, ಬ್ರಹ್ಮಾವರ ತಾಪಂ ಇಒ ಇಬ್ರಾಹಿಂಪುರ, ಉಡುಪಿ ತಾಪಂ ಇಒ ವಿಜಯ್, ನೀರು ಸರಬರಾಜು ಇಲಾಖೆ ಇಂಜಿನಿಯರ್ ಉದಯ ಶೆಟ್ಟಿ, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X