Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೂಲ್ಪಡು ಮಡಿವಾಳಸಾಲು ಹೊಳೆ...

ಸೂಲ್ಪಡು ಮಡಿವಾಳಸಾಲು ಹೊಳೆ ಹೊಳೆತ್ತದಿದ್ದರೆ ಹೋರಾಟ: ರೈತಧ್ವನಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 April 2025 7:51 PM IST
share
ಸೂಲ್ಪಡು ಮಡಿವಾಳಸಾಲು ಹೊಳೆ ಹೊಳೆತ್ತದಿದ್ದರೆ ಹೋರಾಟ: ರೈತಧ್ವನಿ ಎಚ್ಚರಿಕೆ

ಕೋಟ, ಎ.23: ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದೂರುನಿಂದ ಕೋಟ ಗ್ರಾಪಂ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂಲ್ಪಡು ಮಡಿವಾಳ ಸಾಲು ಹೊಳೆ ಹೂಳು ಸಮಸ್ಯೆಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರೀಯೆ ಪೂರ್ಣಗೊಳಿಸಿ ಈ ವರ್ಷದ ಮಳೆಗಾಲದ ಆರಂಭಕ್ಕೂ ಮೊದಲು ಹೂಳೆ ಹೂಳು ತೆಗೆಯಬೇಕೆಂದು ರೈತಧ್ವನಿ ಸಂಘದ ಪ್ರಮುಖರಾದ ಟಿ.ಮಂಜುನಾಥ್ ಗಿಳಿಯಾರ್ ಆಗ್ರಹಿಸಿದ್ದಾರೆ.

ಕೋಟದ ಅಮೃತೇಶ್ವರಿ ದೇಗುಲದಲ್ಲಿ ಮಂಗಳವಾರ ನಡೆದ ಕೋಟದ ರೈತಧ್ವನಿ ಸಂಘಟನೆ ಸಭೆಯಲ್ಲಿ ಅವರು ಮಾತನಾಡುತಿದ್ದರು. ಕಳೆದ ಹಲವಾರು ವರ್ಷಗಳಿಂದ ತೆಕ್ಕಟ್ಟೆ ಉಳ್ಳೂರು, ಬೇಳೂರು, ಗಿಳಿಯಾರು, ಕಾರ್ತಟ್ಟು, ಚಿತ್ರಪಾಡಿ, ಬನ್ನಾಡಿ, ಉಪ್ಪಾಡಿ, ಸಾಲಿಗ್ರಾಮ ವ್ಯಾಪ್ತಿಯ ರೈತರು ಕೃತಕ ನೆರೆ ಹಾವಳಿಗೆ ತುತಾತಿಗುತ್ತಿರುವ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ರೈತಧ್ವನಿ ಹೋರಾಟ ನಡೆಸಿದ್ದು ಪ್ರಸ್ತುತ ರಾಜ್ಯ ಸರಕಾರ ವಾರಾಹಿ ಯೋಜನೆಯಡಿ ಹೊಳೆ ಹೂಳೆ ತೆಗೆಯುವ ಸಂಬಂಧ ಈಗಾಗಲೇ 4.5ಕೋಟಿ ರೂ. ಮಿಸಲಿರಿಸಿ ಟೆಂಡರ್ ಪ್ರಕೀಯೆ ಬಾಕಿ ಇರಿಸಿದೆ. ಈ ಬಗ್ಗೆ ರೈತರು ಈ ವರ್ಷದ ಮಳೆಗಾಲದೊಳಗೆ ಹೊಳೆ ಹೂಳಿನಿಂದ ಮುಕ್ತಗೊಳಿಸಿ ಕೃಷಿ ಕಾಯಕಕ್ಕೆ ಅನೂಲಕರ ವಾತಾವರಣ ಸೃಷ್ಠಿಯಾಗಬೇಕು, ಒಂದೊಮ್ಮೆ ವಿಳಂಬವಾದರೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ರೈತಧ್ವನಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ನಿಯೋಗ ಭೇಟಿ: ಬೆಳಗಾವಿ ಅಧಿವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೊಳೆ ಸಾಲು ಹೂಳೆತ್ತುವ ಸಂಬಂಧ 4.5ಕೋಟಿ ರೂ. ಅನುದಾನಕ್ಕೆ ಅಂಕಿತ ಹಾಕಿದ್ದು ಇದರ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲು ರೈತ ಮುಖಂಡರ ನಿಯೋಗ ಬೆಂಗಳೂರಿಗೆ ತೆರಳಿ ಆಗ್ರಹಿಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.

ಅಲ್ಲದೆ ಶೀಘ್ರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮುಖಂಡರಾದ ದಿನೇಶ್ ಮೊಳಹಳ್ಳಿ ಹಾಗೂ ಶಾಸಕರು, ಸಂಸದರನ್ನು ಸಂಪರ್ಕಿಸಲು ರೈತಧ್ವನಿ ಸಂಘದ ಗೌರವಾಧ್ಯಕ್ಷ ಆನಂದ್ ಸಿ.ಕುಂದರ್ ಸಭೆಯಲ್ಲಿ ಸೂಚಿಸಿದರು.

ರೈತ ಪರ ಹೆಸರಿಟ್ಟುಕೊಂಡು ರಾಜಕಾರಣಗೊಳಿಸುವುದು ಪ್ರಸ್ತುತ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ರೈತಪರ ಹೋರಾಟದಲ್ಲಿ ರಾಜಕೀಯ ಮಾಡ ಬಾರದು. ಪಕ್ಷಬೇಧ ಮರೆತು ರೈತ ಪರವಾಗಿ ಹೋರಾಟಕ್ಕಿಳಿಯ ಬೇಕಾಗಿದೆ ಎಂದು ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹೇಳಿದರು.

ಈ ಸಂದರ್ಭದಲ್ಲಿ ರೈತಧ್ವನಿ ಸಂಘದ ಪ್ರಮುಖರಾದ ತಿಮ್ಮ ಪೂಜಾರಿ, ವಿಜಯ ಕುಂದರ್, ಬಾಬು ಶೆಟ್ಟಿ, ಹಂಡಿಕೆರೆ ರಾಘವೇಂದ್ರ ಶೆಟ್ಟಿ, ಸುಬಾಷ್ ಶೆಟ್ಟಿ, ನಾಗರಾಜ್ ಗಾಣಿಗ ಸಾಲಿಗ್ರಾಮ, ಮಹಾಬಲ ಪೂಜಾರಿ, ತಿಮ್ಮ ಕಾಂಚನ್, ದಿನೇಶ್ ಪೂಜಾರಿ, ಶೀಲರಾಜ್ ಕಾಂಚನ್, ಜಗನಾಥ ಕಾಂಚನ್, ಪ್ರಕಾಶ್ಚಂದ್ರ ಶೆಟ್ಟಿ, ರಾಮಣ್ಣ ಶೆಟ್ಟಿ, ಭುಜಂಗ ಗುರಿಕಾರ, ಗೋಪಾಲ ಬಂಗೇರ, ಗಿರೀಶ್ ಗಾಣಿಗ ಬೆಟ್ಲಕ್ಕಿ, ಗುರುರಾಜ್ ಆಚಾರ್ ಉಪಸ್ಥಿತರಿದ್ದರು. ಚಂದ್ರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X