ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ

ಉಡುಪಿ, ಎ.23: ಬೆಂಗಳೂರಿನ ವಿದ್ಯಾನಗರದಲ್ಲಿರುವ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಪ್ರತಿಭಾನ್ವಿತ ರಾಗಿರುವ ಪ್ರಥಮ ಪಿಯುಸಿ ಮಟ್ಟದ ಅರ್ಹ ಕ್ರೀಡಾಪಟು ಗಳ ಆಯ್ಕೆ ಮಾಡಿ ಪ್ರವೇಶ ಕಲ್ಪಿಸುವ ಸಂಬಂಧ, ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಮೇ 5 ಮತ್ತು 6ರಂದು ಬೆಂಗಳೂರು ವಿದ್ಯಾನಗರದ ಕ್ರೀಡಾಶಾಲೆ ಶ್ರೀಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಆಸಕ್ತ ಅರ್ಹ ಕ್ರೀಡಾಪಟುಗಳು ಸೂಕ್ತ ದಾಖಲೆಗಳೊಂದಿಗೆ ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9845432303ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





