ಅಬಕಾರಿ ಅಧಿಕಾರಿ, ಸಿಬ್ಬಂದಿಗೆ ವಿಶೇಷ ತರಬೇತಿ ಕಾರ್ಯಾಗಾರ

ಉಡುಪಿ, ಎ.26: ಉಡುಪಿ ಜಿಲ್ಲಾ ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ವಿಮರ್ಶಾತ್ಮಕ ಚಿಂತನೆ, ತಾರ್ಕಿಕತೆ ಮತ್ತು ಇತರ ಅಗತ್ಯ ಕೌಶಲ್ಯ ಎಂಬ ವಿಷಯದ ಒಂದು ದಿನದ ವಿಶೇಷ ತರಬೇತಿ ಕಾರ್ಯಗಾರವನ್ನು ಶನಿವಾರ ಆಯೋಜಿಸಲಾಗಿತ್ತು.
ತರಬೇತಿ ಕಾರ್ಯಗಾರವನ್ನು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ.ಬಾಲಕೃಷ್ಣ ಸಿ.ಎಚ್. ಉದ್ಘಾಟಿಸಿ, ಶುಭ ಕೋರಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಎ.ಎಚ್.ಸಾಗರ್ ಭಾಗವಹಿಸಿ ಕಾರ್ಯಗಾರ ನಡೆಸಿ ಕೊಟ್ಟರು. ಈ ಕಾರ್ಯಗಾರದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
Next Story





