ಎಸೆಸೆಲ್ಸಿ ಪರೀಕ್ಷೆ: ಕೊರಗ ವಿದ್ಯಾರ್ಥಿನಿ ಉತ್ತಮ ಸಾಧನೆ

ಉಡುಪಿ : ಪೆರ್ಡೂರು ಸರಕಾರಿ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಎಸೆಸೆಲ್ಸಿ ಪರೀಕ್ಷೆಯಲ್ಲಿ 537(ಶೇ.85.92) ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಕೊರಗ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ.
ಗ್ರಾಮ ಪಂಚಾಯತ್ ಕೆಲಸ ಮಾಡುವ ಪ.ಪಂಗಡ ಸಮುದಾಯದ ಸತೀಶ್ ಹಾಗೂ ಗೃಹಿಣಿ ಗುಣವತಿ ದಂಪತಿಗಳ ಪುತ್ರಿಯಾಗಿರುವ ಸಿಂಚನಾ ಪೆರ್ಡೂರಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ. ಮುಂದೆ ವಿಜ್ಞಾನ ವಿಭಾಗದಲ್ಲಿ ಮುಂದುವರಿದು ಇಂಜಿನಿಯರಿಂಗ್ ಮಾಡುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.
Next Story





