Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒಳಮೀಸಲಾತಿ ಸಮೀಕ್ಷೆ ವೇಳೆ ಆಧಾರ್ ಕಾರ್ಡ್...

ಒಳಮೀಸಲಾತಿ ಸಮೀಕ್ಷೆ ವೇಳೆ ಆಧಾರ್ ಕಾರ್ಡ್ ತೋರಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ3 May 2025 9:59 PM IST
share
ಒಳಮೀಸಲಾತಿ ಸಮೀಕ್ಷೆ ವೇಳೆ ಆಧಾರ್ ಕಾರ್ಡ್ ತೋರಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಮೇ 5ರಿಂದ 17ರವರೆಗೆ ನಡೆಯುವ ಮನೆ ಮನೆ ಸಮೀಕ್ಷೆ ವೇಳೆ ಕುಟುಂಬದ ಯಾರಾದರೂ ಒಬ್ಬರು ಗಣತಿದಾರರಿಗೆ ಆಧಾರ್ ಕಾರ್ಡ್ ಅಥವಾ ಕುಟುಂಬದ ಪಡಿತರ ಚೀಟಿಯನ್ನು ತೋರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ನಡೆಯಲಿರುವ ಮನೆಮನೆ ಸಮೀಕ್ಷೆ ಕುರಿತಂತೆ ವಿವರಿಸಲು ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗಾಗಿಯೇ ಈ ಸಮೀಕ್ಷೆ ನಡೆಯಲಿರುವುದರಿಂದ ಪ್ರತಿಯೊಬ್ಬರೂ ಗೊತ್ತಿದ್ದರೆ ಉಪಜಾತಿ ಯನ್ನು ಸಮೀಕ್ಷೆ ವೇಳೆ ನಮೂದಿಸಬೇಕು ಎಂದರು.

ಪರಿಶಿಷ್ಟ ಜಾತಿಯಲ್ಲಿ ಕೇಂದ್ರ ಸರಕಾರ 101 ಉಪಜಾತಿಗಳನ್ನು ಗುರುತಿಸಿದೆ. ಇವುಗಳಲ್ಲಿ ಯಾವುದೇ ಉಪಜಾತಿಗೆ ಸೇರಿದ್ದರೂ ಅದನ್ನು ನಮೂದಿಸುವಂತೆ ಅವರು ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಆದಿ ದ್ರಾವಿಡ ಹಾಗೂ ಆದಿ ಕರ್ನಾಟಕ ಜಾತಿಯನ್ನು ಹೆಚ್ಚಾಗಿ ಎಲ್ಲರೂ ನಮೂದಿಸುತ್ತಾರೆ. ಈ ಬಾರಿ ಯಾವುದೇ ಉಪಜಾತಿ ನಮೂದಿಸಲು ಅವಕಾಶವಿದೆ. ನೀವು ಹೇಳಿದ ಜಾತಿಯನ್ನು ಮಾತ್ರ ಗಣತಿದಾರರು ಮೊಬೈಲ್ ಆ್ಯಪ್ ಮೂಲಕ ನಡೆಯುವ ಸಮೀಕ್ಷೆಯಲ್ಲಿ ನಮೂದಿಸಲಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣಕ್ಕಾಗಿ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ದತ್ತಾಂಶಗಳನ್ನು ಸಂಗ್ರಹಿಸಲು ಶಾಲಾ ಶಿಕ್ಷಕರಿಂದ ಮನೆಮನೆ ಸಮೀಕ್ಷೆ ನಡೆಸಲು ಸರಕಾರ ಆದೇಶಿಸಿದೆ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಮೇ5ರಿಂದ 17ರವರೆಗೆ ಮನೆಮನೆ ಸಮೀಕ್ಷೆ ನಡೆಯಲಿದೆ. ಮತದಾರರ ಪಟ್ಟಿಯ ಆಧಾರದಲ್ಲಿ ಪರಿಶಿಷ್ಟ ಜಾತಿಗಳ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲು ಜಿಲ್ಲೆಯ 1,112 ಬೂತ್‌ಗಳಲ್ಲಿ 1,112 ಶಾಲಾ ಶಿಕ್ಷಕರನ್ನು ಗಣತಿದಾರರಾಗಿ ನೇಮಿಸಲಾಗಿದೆ. ಇವರ ಮೇಲ್ವಿಚಾರಣೆಗೆ 112 ಮೇಲ್ವಿಚಾರಕ ರನ್ನು ಸಹ ನೇಮಿಸಲಾಗಿದೆ ಎಂದು ಡಾ.ವಿದ್ಯಾಕುಮಾರಿ ತಿಳಿಸಿದರು.

ಸಮೀಕ್ಷೆಗಾಗಿ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಎರಡು ತರಬೇತಿ ನೀಡಲಾ ಗಿದೆ. ಗಣತಿದಾರರಿಗೂ ತಾಲೂಕು ಮಟ್ಟದಲ್ಲಿ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಿಂದ ತರಬೇತಿ ನೀಡಲಾಗಿದೆ. ಸಮೀಕ್ಷೆ ಬರುವವರಲ್ಲಿ ಜನರು ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಜಿಲ್ಲಾದಿಕಾರಿಗಳು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯನ್ನು ಜಿಲ್ಲಾ ಮಟ್ಟದಲ್ಲಿ, ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಡುಪಿ, ಕಾಪು ಹಾಗೂ ಕಾರ್ಕಳ ತಾಲೂಕು ಮಟ್ಟದ, ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಗೆ ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ ಎಂದೂ ಅವರು ವಿವರಿಸಿದರು.

ಸಮೀಕ್ಷೆಯನ್ನು ಮೊಬೈಲ್ ಆ್ಯಪ್‌ನಲ್ಲಿ ಎರಡು ಹಂತಗಳಲ್ಲಿ ನಡೆಸಲಾಗು ತ್ತದೆ. ಮೇ 5ರಿಂದ 17ರವರೆಗೆ ಸಮೀಕ್ಷೆದಾರರು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ಮಾಹಿತಿ ಸಂಗ್ರಹಿಸುವರು. ಬಳಿಕ ಮೇ 9ರಿಂದ 21ರವರೆಗೆ ಮನೆ ಭೇಟಿ ಸಂದರ್ಭದಲ್ಲಿ ಬಿಟ್ಟು ಹೋದ ಪ.ಜಾತಿ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರಗಳನ್ನು ನಡೆಸಲಾಗುತ್ತದೆ. ನಂತರವೂ ಬಿಟ್ಟು ಹೋದವರಿಗೆ 25ರವರೆಗೆ ಆನ್‌ಲೈನ್ ಮೂಲಕ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಅವಕಾಶವಿದೆ ಎಂದೂ ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X