Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ...

ಮಲ್ಪೆ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಬಲಿಯಾದವರಿಗೆ ಸದ್ಗತಿಗಾಗಿ ತರ್ಪಣ

ವಾರ್ತಾಭಾರತಿವಾರ್ತಾಭಾರತಿ5 May 2025 9:24 PM IST
share
ಮಲ್ಪೆ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಬಲಿಯಾದವರಿಗೆ ಸದ್ಗತಿಗಾಗಿ ತರ್ಪಣ

ಉಡುಪಿ: ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ವರಿಗೆ ಮಲ್ಪೆ ಕಡಲ ತೀರದಲ್ಲಿ ಉಡುಪಿಯ ಅಭಿನವ ಭಾರತ ಎಂಬ ಸಂಘಟನೆ ಸಾಂಪ್ರದಾಯಿಕ ರೀತಿಯಲ್ಲಿ ತರ್ಪಣ ನೀಡಿ, ಹೋಮ ನಡೆಸಿ ನೊಂದ ಕುಟುಂಬದ ಜೊತೆಗಿರುವ ಸಂದೇಶ ನೀಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ನರಮೇಧದಲ್ಲಿ ಮೃತಪಟ್ಟವರ ಆತ್ಮಕ್ಕೆ ಸದ್ಗತಿಗಾಗಿ ಪ್ರಾರ್ಥಿಸಲಾಯಿತಲ್ಲದೇ, ಹೋಮ ಮತ್ತು ತರ್ಪಣ ನೀಡುವ ಮೂಲಕ ಅಪರ ಧಾರ್ಮಿಕ ವಿಧಿಯನ್ನು ಉಡುಪಿ ಸಮೀಪದ ಮಲ್ಪೆಯ ಕಡಲ ತೀರದಲ್ಲಿ ನಡೆಸಲಾಯಿತು.

ಮಲ್ಪೆಯ ಹನೂಮಾನ್ ವಿಠೋಭ ರುಕುಮಾಯಿ ಭಜನಾ ಮಂದಿರದ ಮುಂಭಾಗದ ಕಡಲತೀರದಲ್ಲಿ ಎಲ್ಲಾ ವಿಧಿಗಳು ನೆರವೇರಿದವು. ಘಟನೆಯಲ್ಲಿ ಮೃತಪಟ್ಟ 25 ಜನ ಹಿಂದೂಗಳ ಭಾವಚಿತ್ರವನ್ನು ಇಟ್ಟು ಪುಷ್ಪಾರ್ಚನೆಗೈದು ಹೋಮವನ್ನು ನೆರವೇರಿಸಲಾಯ್ತು. ಬ್ರಹ್ಮಶ್ರೀ ವೇದಮೂರ್ತಿ ವಿದ್ವಾನ್ ಸೂರಾಲು ತಂತ್ರಿಗಳ ನೇತೃತ್ವದಲ್ಲಿ, ಎಲ್ಲಾ ಧಾರ್ಮಿಕ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಗೀತಾ ತ್ರಿಷ್ಟುಪ್ ಹೋಮ ನೆರವೇರಿಸಿ ಪೂರ್ಣಾಹುತಿ ಮಾಡಲಾಯ್ತು. ಮೃತಪಟ್ಟವರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಕ್ಕೆ ನೋವು ಕಡಿಮೆಯಾಗಿ ಶ್ರೇಯಸ್ಸಾಗಲಿ ಎಂದು ಪ್ರಾರ್ಥಿಸಲಾಯ್ತು.

ಬ್ರಹ್ಮಶ್ರೀ ವೇದಮೂರ್ತಿ ವಿದ್ವಾನ್ ಸೂರಾಲು ತಂತ್ರಿಗಳು ಮಾತನಾಡಿ, ಸಮಾಜದಲ್ಲಿ ಒಬ್ಬರಿಗೊಬ್ಬರು ಆಗಬೇಕು ಜೊತೆಯಾಗಿ ಸಮಷ್ಠಿ ಭಾವ ಬರಬೇಕು. ವೈದಿಕ, ಉಪನಿಷತ್ತು ಕಾಲದ ವ್ಯವಸ್ಥೆ ಪುನರ್ಜೀವ ಆಗಬೇಕು. ಉಪನಿಷತ್ತು ಕಾಲದ ಸಮಷ್ಟಿ ಭಾವ ಬಂದರೆ ಚಂದ. ದೇಶದ ಬೇರೆ ಬೇರೆ ಕಡೆಯ ಜನ ಪಹಲ್ಗಾಮ್‌ನಲ್ಲಿ ಮರಣ ಹೊಂದಿದ್ದಾರೆ. ಅವರಿಗೆಲ್ಲರಿಗೂ ಸದ್ಗತಿ ಸಿಗಲಿ. ಪಾರಮಾರ್ಥಿಕ ಭಾವದಿಂದ ಒಳ್ಳೆಯ ಮನಸ್ಸಿನಿಂದ ಯುವಕರು ಎರಡು ಕೈಯಲ್ಲಿ ಸಮುದ್ರದ ನೀರನ್ನು ತರ್ಪಣ ನೀಡಿದ್ದಾರೆ. ಸಮಷ್ಟಿ ಭಾವದಿಂದ ಗೀತಾ ತ್ರಿಷ್ಟುಪ್ ಹೋಮ ಮಾಡಲಾಗಿದೆ ಎಂದರು.

25 ಮಂದಿ ಮೃತರ ಜನ್ಮಸ್ಥಾನ, ಜಾತಿ ಗಮನಕ್ಕೆ ತೆಗೆದುಕೊಳ್ಳದೆ ಸಮಷ್ಟಿ ಭಾವದಿಂದ ಅವರಿಗೆಲ್ಲ ರಿಯೂ ಸದ್ಗತಿ ನೀಡುವ ಕ್ರಿಯೆ ಮಾಡಿದ್ದೇವೆ ಎಂದರು. ಅಭಿನವ ಭಾರತ ಸೊಸೈಟಿ ಸಂಘಟನೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು, 25 ಕುಟುಂಬಗಳ ಪರವಾಗಿ ಹಿಂದೂ ಸಂಘಟನೆ ಗಳ 25 ಯುವಕರು ಈ ಅಪರ ಕ್ರಿಯೆಯ ವಿಧಿಯನ್ನು ನೆರವೇರಿಸಿದರು. ಸಂಘಟನೆಯೊಂದರ ಮುಖಂಡ ಶ್ರೀಕಾಂತ ಶೆಟ್ಟಿ ಕಾರ್ಯಕ್ರಮದ ಆಯೋಜಕರಾಗಿದ್ದರು.

ನೂರಾರು ಸಾರ್ವಜನಿಕರು ಈ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು. ಮೃತರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದರು. ಹನುಮಾನ್ ರುಕುಮಾಯಿ ವಿಠೋಭಾ ಮಂದಿರದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X