ಪಾಕಿಸ್ತಾನಿಗಳ ಗಡಿಪಾರಿಗೆ ತುರ್ತು ಕ್ರಮ: ಡಿಸಿಗೆ ಬಿಜೆಪಿ ಮನವಿ

ಉಡುಪಿ, ಮೇ 6: ಕಾಶ್ಮೀರದಲ್ಲಿ ಭಾರತೀಯರನ್ನು ಹತ್ಯೆಗೈದಿರುವ ಘಟನೆಯ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರಕಾರ ಈಗಾಗಲೇ ಆದೇಶ ಹೊರಡಿಸಿರುವಂತೆ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಶ್ರೀಘ್ರವಾಗಿ ಪತ್ತೆ ಹಚ್ಚಿ ಕೂಡಲೇ ಗಡಿಪಾರು ಮಾಡುವ ಬಗ್ಗೆ ತುರ್ತು ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮುಖಂಡರಾದ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಯರಾಮ್ ಸಾಲ್ಯಾನ್, ಶಿಲ್ಪಾ ಜಿ.ಸುವರ್ಣ, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಅಂಚನ್, ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಸಂಧ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ಅಭಿರಾಜ್ ಸುವರ್ಣ, ರುಡಾಲ್ಫ್ ಡಿಸೋಜ ಉಪಸ್ಥಿತರಿದ್ದರು.





