ಬಡಗಬೆಟ್ಟು ಸೊಸೈಟಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಮೇ 7: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳಿಗೆ ಸೊಸೈಟಿಯ ವತಿಯಿಂದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವು ಉಡುಪಿ ನಗರದ ಹೋಟೆಲ್ ಡಯಾನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಗ್ರಾಹಕರೇ ನಮ್ಮ ದೇವರು. ಆಧುನಿಕ ಬದಲಾವಣೆಗಳಿಗೆ ಒಗ್ಗಿಕೊಂಡು ಒತ್ತಡ ನಿರ್ವಹಣೆ, ಕೌಶಲ್ಯಾಭಿವೃದ್ಧಿ ಯೊಂದಿಗೆ ಗ್ರಾಹಕರಿಗೆ ನಗುಮುಖದ ಉತ್ತಮ ಸೇವೆ ನೀಡುವರೇ ಇಂತಹ ತರಬೇತಿಗಳು ಅತ್ಯಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ನೀಡಿದಂತಹ ಗುರಿಯನ್ನು ಸಾಧಿಸಿದ ವಿವಿಧ ಶಾಖೆಗಳನ್ನು ಗುರುತಿಸಿ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಮಂಗಳೂರಿನ ಹೆಸರಾಂತ ತರಬೇತಿ ಸಂಸ್ಥೆಯಾದ ಮಾಸ್ಟರ್ ಮೈಂಡ್ ಎಂಟರ್‌ಪ್ರೈಸಸ್‌ನ ಶ್ರೀಶ ಕೆ.ಎಂ. ಸಂಘದ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.
ಸಂಘದ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ನಿರ್ದೇಶಕರಾದ ಪುರುಷೋತ್ತಮ ಪಿ.ಶೆಟ್ಟಿ, ಸದಾಶಿವ ನಾಯ್ಕ್, ಮಾಸ್ಟರ್ ಮೈಂಡ್ ಎಂಟರ್‌ಪ್ರೈಸಸ್‌ನ ವಿ.ಕೆ.ಹೆಬ್ಬಾರ್ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ.ಶೇರಿಗಾರ್ ಸ್ವಾಗತಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ವಂದಿಸಿದರು.







