ಭಾರತೀಯರು ಜಾತ್ಯಾತೀತ, ಧರ್ಮಾತೀತವಾಗಿ ಸಂಭ್ರಮಿಸುವ ಸಂತಸದ ಕ್ಷಣ: ಕಿಶೋರ್ ಕುಮಾರ್
’ಆಪರೇಷನ್ ಸಿಂಧೂರ’: ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಉಡುಪಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಹತ್ಯಾಕಾಂಡ ನಡೆಸಿ ರುವ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತ ತಕ್ಕ ಶಾಸ್ತಿಯನ್ನು ಮಾಡಿದೆ. ’ಸಿಂಧೂರ’ ಅಳಿಸಿದವರಿಗೆ ’ಆಪರೇಷನ್ ಸಿಂಧೂರ’ ಮೂಲಕ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ. ಭಾರತೀಯರೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾರತೀಯ ಸೇನೆಯ ’ಆಪರೇಷನ್ ಸಿಂಧೂರ’ ವನ್ನು ಅಭಿನಂದಿಸಿ ಅವರು ಮಾತನಾಡುತಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮುಖಂಡರಾದ ಕಿರಣ್ ಕುಮಾರ್ ಬೈಲೂರು, ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಜಿ.ಸುವರ್ಣ, ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ.ಅಂಚನ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಸಂಧ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ಅಭಿರಾಜ್ ಸುವರ್ಣ, ರುಡಾಲ್ಫ್ ಡಿಸೋಜ, ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ 6 ಮಂಡಲ ಕೇಂದ್ರಗಳಲ್ಲಿ ಸಿಹಿ ಹಂಚಿ ’ಆಪರೇಷನ್ ಸಿಂಧೂರ್’ನ ಯಶಸ್ವಿ ಕಾರ್ಯಾಚರಣೆಯ ಸಂಭ್ರಮಾಚರಣೆ ನಡೆಸಲಾಯಿತು.







