ಎಸ್‌ಡಿಪಿಐ ಉಡುಪಿ ಕ್ಷೇತ್ರ ಕಾರ್ಯಕರ್ತರ ಸಮಾವೇಶ

ಉಡುಪಿ, ಮೇ 8: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಕ್ಷೇತ್ರ ಸಮಿತಿ ವತಿಯಿಂದ ದಿಟ್ಟ ನಾಯಕತ್ವ ಬಲಿಷ್ಠ ಕಾರ್ಯಕರ್ತ ಎಂಬ ಘೋಷಣೆಯೊಂದಿಗೆ ಕಾರ್ಯಕರ್ತರ ಹಾಗೂ ಸದಸ್ಯರ ಸಮಾವೇಶ ಉಡುಪಿಯ ರಿವರ್ ಬ್ರೀಝ್ ರೆಸಾರ್ಟ್‌ನಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಎಸ್‌ಡಿಪಿಐ ಉಡುಪಿ ಕ್ಷೇತ್ರ ಅಧ್ಯಕ್ಷ ಅಶ್ರಫ್ ಬಾವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಹಿದ್ ಅಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಝಾಕ್ ಮತ್ತು ಶಂಶುದ್ದೀನ್ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು
Next Story





