ಲಾರಿ ಢಿಕ್ಕಿ: ಪಾದಚಾರಿ ಮೃತ್ಯು

ಉಡುಪಿ, ಮೇ 8: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ 7ರಂದು ರಾತ್ರಿ ವೇಳೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಕಾರ್ಮಿಕ ರವಿ ಕುಮಾರ್ ಎಂದು ಗುರುತಿಸಲಾಗಿದೆ. ಸಂತೆಕಟ್ಟೆಯಲ್ಲಿ ನಿಮಾಣವಾಗುತ್ತಿರುವ ರಾಷ್ಟೀಯ ಹೆದ್ದಾರಿ 66ರ ನೀರು ಹರಿದು ಹೋಗುವ ಚರಂಡಿಯ ಡ್ರಿಲ್ ಕೆಲಸ ಮಾಡುತ್ತಿದ್ದು, ಬಳಿಕ ಅವರು ನೀರು ಕುಡಿಯಲೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ರವಿ ಕುಮಾರ್ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





