ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 11: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿ ವತಿಯಿಂದ 2024 -25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಪಡೆದಿರುವ ಉಡುಪಿ ಜಿಲ್ಲಾ ವ್ಯಾಪ್ತಿಯ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದುದರಿಂದ ಶೇ.90ಕ್ಕಿಂತ ಅಧಿಕ ಅಂಕ ಪಡೆದಿರುವ ವಿದ್ಯಾರ್ಥಿಗಳು ತಕ್ಷಣ ಗೂಗಲ್ ಫಾರ್ಮ್‌ನಲ್ಲಿ https://forms.gle/6EjXiAUWjmABw7sf8 ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15. ಹೆಚ್ಚಿನ ಮಾಹಿತಿಗಾಗಿ ಸಂಚಾಲಕ ಝಮೀರ್ ಅಹ್ಮದ್ ರಶಾದಿ (ಮೊ-9880122968) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
Next Story





