ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕೋಟ,ಮೇ 11: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೇ 10ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಶಿರಿಯಾರ ಗ್ರಾಮದ ಜಲಜಮ್ಮ (72) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಊಟ ಮಾಡಿ ನಂತರ ಹಿತ್ತಲ ಕಡೆ ಹೋಗಿದ್ದು ಮನೆಯ ಪಕ್ಕದಲ್ಲಿರುವ ಆವರಣವಿಲ್ಲದ ಕೆರೆಗೆ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





