ಲಾರಿ ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಬ್ರಹ್ಮಾವರ, ಮೇ 12: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ 11ರಂದು ರಾತ್ರಿ ವೇಳೆ ಹಂದಾಡಿ ಗ್ರಾಮದ ಗುಡ್ಡಿ ಬಾರ್ ಎದುರು ನಡೆದಿದೆ.
ಮೃತರನ್ನು ಅಶೋಕ್ ಎಂದು ಗುರುತಿಸಲಾಗಿದೆ. ಬ್ರಹ್ಮಾವರ ಕಡೆಯಿಂದ ಬಾರ್ಕೂರು ಕಡೆಗೆ ಬರುತ್ತಿದ್ದ ಲಾರಿಯು ರಸ್ತೆ ದಾಟುತ್ತಿದ್ದ ಅಶೋಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





