ಡಿಪ್ಲೋಮಾ ಪ್ರವೇಶ: ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ, ಮೇ 13: ಮೈಸೂರಿನಲ್ಲಿರುವ ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಜಿಲ್ಲೆಯ ಅರ್ಹ ವಿಶೇಷ ಚೇತನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಹಾಗೂ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿ ಗಳು ಜೂನ್ 16ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9844644937ನ್ನು ಸಂಪರ್ಕಿಸಬಹುದು ಎಂದು ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
Next Story





