Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೀಚ್, ಮೀನುಗಾರಿಕಾ ಜೆಟ್ಟಿಗಳಲ್ಲಿ ಮಾದಕ...

ಬೀಚ್, ಮೀನುಗಾರಿಕಾ ಜೆಟ್ಟಿಗಳಲ್ಲಿ ಮಾದಕ ವಸ್ತುಗಳ ಸರಬರಾಜಿನ ಮೇಲೆ ನಿಗಾ: ಉಡುಪಿ ಡಿಸಿ ವಿದ್ಯಾಕುಮಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 May 2025 7:49 PM IST
share
ಬೀಚ್, ಮೀನುಗಾರಿಕಾ ಜೆಟ್ಟಿಗಳಲ್ಲಿ ಮಾದಕ ವಸ್ತುಗಳ ಸರಬರಾಜಿನ ಮೇಲೆ ನಿಗಾ: ಉಡುಪಿ ಡಿಸಿ ವಿದ್ಯಾಕುಮಾರಿ ಸೂಚನೆ

ಉಡುಪಿ, ಮೇ 14: ಜಿಲ್ಲೆಯ ಬಂದರುಗಳ ಮೀನುಗಾರಿಕಾ ಜೆಟ್ಟಿಗಳಲ್ಲಿ ಹಾಗೂ ಬೀಚ್‌ಗಳಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆಯ ಕುರಿತಂತೆ ಕರಾವಳಿ ಪೊಲೀಸರು ವಿಶೇಷ ನಿಗಾ ವಹಿಸು ವಂತೆ ಹಾಗೂ ಆಗಾಗ ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಸಿಓಆರ್‌ಡಿನ (ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅವರು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳತ್ತ ಯುವ ಸಮುದಾಯ ಹೆಚ್ಚೆಚ್ಚು ಆರ್ಕಷಿತಗೊಳ್ಳುತ್ತಿದೆ. ಇವುಗಳ ಬಳಕೆಯಿಂದ ದೇಹ ಹಾಗೂ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದವರು ತಿಳಿಸಿದರು.

ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ಜಿಲ್ಲೆಯ ವಿದ್ಯಾಸಂಸ್ಥೆಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದ ಜಿಲ್ಲಾಧಿಕಾರಿ, ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂಥ ಕಾರ್ಯಕ್ರಮಗಳ ಉಪಯುಕ್ತತೆಯ ಕುರಿತಂತೆ ಸಮಗ್ರ ಮಾಹಿತಿಗಳನ್ನು ಕಲೆ ಹಾಕಬೇಕು ಎಂದೂ ಅವರು ಹೇಳಿದರು.

ತಂಬಾಕು ಉತ್ಪನ್ನಗಳು ಸೇರಿದಂತೆ ಕೆಲ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾ ಗುತ್ತಿದ್ದಾರೆ.ಇವರಿಗೂ ಸಹ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತನೆಯ ಕಾರ್ಯಕ್ರಮ ಗಳನ್ನು ಕಾರ್ಮಿಕ ಇಲಾಖೆಯ ಮೂಲಕ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಹಮ್ಮಿಕೊಂಡು ಅವರು ಇಂಥ ದುಶ್ಚಟಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಡಾ.ವಿದ್ಯಾ ಕುಮಾರಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಂಜಾ ಬೆಳೆ ಬಗ್ಗೆ ನಿಗಾ: ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಿಂದಾಗ್ಗೆ ಕೃಷಿ ಜಮೀನುಗಳು ಹಾಗೂ ತೋಟಗಳಿಗೆ ಭೇಟಿ ನೀಡಿ ಅಲ್ಲಿ ರಹಸ್ಯವಾಗಿ ಗಾಂಜಾ ಬೆಳೆಗಳನ್ನು ಬೆಳೆಯು ತ್ತಿದ್ದಾರಾ ಎಂಬ ಬಗ್ಗೆ ಪರಿಶೀಲಿಸಬೇಕು. ಅಂಚೆ ಇಲಾಖೆಯ ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವಿಸ್ ಕಚೇರಿಗಳನ್ನು ಹಾಗೂ ಆನ್‌ಲೈನ್ ಮಾರುಕಟ್ಟೆಯ ಗೋದಾಮುಗಳ ಪರಿಶೀಲನೆ ನಡೆಸಬೇಕು.ರೈಲ್ವೆ ಇಲಾಖೆಯ ಸಿಬ್ಬಂದಿಗಳು ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ಇಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳ ಕುರಿತಂತೆ 9 ಪ್ರಕರಣಗಳು ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿವೆ. ಇವುಗಳಲ್ಲಿ 6 ಪ್ರಕರಣಗಳಲ್ಲಿ ಒಟ್ಟು 80,000 ರೂ. ದಂಡ ವಿಧಿಸ ಲಾಗಿದೆ. ಇನ್ನು 3 ಪ್ರಕರಣಗಳು ವಿಚಾರಣೆಯಲ್ಲಿವೆ. ಜೀವಕ್ಕೆ ಹಾನಿ ಉಂಟು ಮಾಡುವಂತಹ ಆಹಾರ ಪದಾರ್ಥಗಳ ಮಾರಾಟ ಮಾಡಿದ 6 ಪ್ರಕರಣಗಳು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾಖಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮಾರಾಟವಾಗುವ ಸಿದ್ಧ ಆಹಾರಗಳ ಗುಣಮಟ್ಟ ಗಳ ಕುರಿತಂತೆ ನಿರಂತರವಾಗಿ ಸ್ಯಾಂಪಲ್‌ಗಳನ್ನು ಪಡೆದು ಪ್ರಯೋಗ ಶಾಲೆ ಗಳಿಗೆ ವಿಶ್ಲೇಷಣೆಗೆ ಕಳುಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಮಾತನಾಡಿ, ನಿರ್ಬಂಧಿತ ಮತ್ತು ಬರಿಸುವ ಔಷಧಿಯನ್ನು ಜನಸಾಮಾನ್ಯರಿಗೆಲ್ಲ ಮಾರಾಟ ಮಾಡುವ ಹಾಗಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿ ಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು ಎಂದರು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಎಸ್ಪಿ ಮನವಿ ಮಾಡಿದರು.

ಸಭೆಯಲ್ಲಿ ಎಎಸ್ಪಿ ಪಿ.ಎ ಹೆಗಡೆ, ಡಿಎಫ್‌ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X