ಮನೆಗೆ ನುಗ್ಗಿ ನಗ - ನಗದು ಕಳವು

ಹಿರಿಯಡ್ಕ, ಮೇ 14: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮೇ 13ರಂದು ಮಧ್ಯಾಹ್ನ ವೇಳೆ ಬೆಳ್ಳಂಪಳ್ಳಿ ಎಂಬಲ್ಲಿ ನಡೆದಿದೆ.
ಮಾಲತಿ ಎಂಬವರ ಮನೆಯ ಮುಂಭಾಗದ ಬಾಗಿಲಿನ ಚಿಲಕವನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು, ಕಾಪಾಟಿನಲ್ಲಿದ್ದ 35,000ರೂ. ನಗದು ಹಾಗೂ 41ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿ ಕೊಂಡು ಹೋಗಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story