Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ...

ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ: ಕೃಷ್ಣಯ್ಯ

ವಾರ್ತಾಭಾರತಿವಾರ್ತಾಭಾರತಿ16 May 2025 7:58 PM IST
share
ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ: ಕೃಷ್ಣಯ್ಯ

ಉಡುಪಿ, ಮೇ 16: ಕರಾವಳಿಯ ಜಾನಪದವನ್ನು ಕೇಂದ್ರವಾಗಿಟ್ಟುಕೊಂಡು ಡಾ.ಶಿವರಾಮ ಕಾರಂತರು ಸಾಹಿತ್ಯ ರಚನೆ ಮಾಡಿದ್ದಾರೆ. ಈ ದೃಷ್ಟಿಯಿಂದ ಕಾರಂತರ ಸಾಹಿತ್ಯದ ಅಧ್ಯಯನವೆಂದರೆ ಕರಾವಳಿಯ ಜಾನಪದ ಅಧ್ಯಯನವು ಆಗುತ್ತದೆ ಎಂದು ಜಾನಪದ ಸಂಶೋಧಕ ಪ್ರೊ.ಎಸ್.ಎ.ಕೃಷ್ಣಯ್ಯ ಹೇಳಿದ್ದಾರೆ.

ಕೋಟ ಶಿವರಾಮ ಕಾರಂತ ಟ್ರಸ್ಟ್ ಹಾಗೂ ಅಜ್ಜರಕಾಡು ಡಾ.ಜಿ ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತತಿಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಶುಕ್ರವಾರ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಸಭಾಭವನದಲ್ಲಿ ನಡೆದ ಡಾ.ಶಿವರಾಮ ಕಾರಂತರ ಬರಹ ಮತ್ತು ಜಾನಪದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಕಾರಂತರು ಸಾಹಿತ್ಯ ಮಾತ್ರವಲ್ಲದೇ, ಪರಿಸರದ ಬಗ್ಗೆಯೂ ಹೋರಾಟ ಮಾಡಿದ್ದರು. ದಿಟ್ಟತನ, ಸ್ಪಷ್ಟ ನೇರ ಮಾತು ಅವರಲ್ಲಿ ಕಾಣುತ್ತಿದ್ದು, ವಿಶ್ವದಲ್ಲೇ ಕರಾವಳಿಯ ಹೆಸರನ್ನು ಸಾಹಿತ್ಯದಲ್ಲಿ ಮುಂಚೂಣಿಯಲ್ಲಿ ಇರಿಸುವಲ್ಲಿ ಕಾರಂತರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಪ್ರಕೃತಿಯ ಸೂಕ್ಷ್ಮತೆಗಳನ್ನು ಗಮನಿಸಿ, ಅದನ್ನು ತಮ್ಮ ಸಾಹಿತ್ಯದ ಮೂಲಕ ಜನರಿಗೆ ತಲುಪಿಸಿದ ಕೆಲವೇ ಕೆಲಮ ಸಾಹಿತಿಗಳಲ್ಲಿ ಕಾರಂತರು ಒಬ್ಬರು. ವಿವಿಧ ಕ್ಷೇತ್ರಗಳಲ್ಲಿ ಅವರು ಹೊಂದಿದ್ದ ಜ್ಞಾನ ಅಗಾಧವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ಕಾಲೇಜು ಹಾಗೂ ಸ್ನಾತತಿಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಕೆ. ವಹಿಸಿದ್ದರು. ಈ ಸಂದರ್ಭದಲ್ಲಿ ಶಿಬಿರ ದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಇತ್ತೀಚೆಗೆ ನಿಧನರಾದ ಪ್ರೊ.ಹೇರಂಜೆ ಕೃಷ್ಣ ಭಟ್ ಹಾಗೂ ನಂದಳಿಕೆ ಬಾಲಚಂದ್ರ ರಾವ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ನಿಕೇತನಾ, ಸಹ ಪ್ರಾಧ್ಯಾಪಕ ಡಾ.ಪ್ರಸನ್ನ ಪಿ.ಬಿ., ಪ್ರಾಧ್ಯಾಪಕಿ ಹೇಮಾವತಿ ಉಪಸ್ಥಿತರಿದ್ದರು. ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸದಸ್ಯ ಜಿ.ಎಂ.ಶರೀಫ್ ಹೂಡೆ ವಂದಿಸಿದರು. ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X