ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಉಡುಪಿ, ಮೇ 16: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ 15ರಂದು ರಾತ್ರಿ ವೇಳೆ ಕೊಡಂಕೂರು ಗಣೇಶ್ ಮಾರ್ಬಲ್ ಬಳಿ ರಾಷ್ಟೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ರೋಯ್ ಡೈಲನ್ ಡಾಯಸ್ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ರೋಯ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದಜೆ. ಅಪಘಾತ ಉಂಟು ಮಾಡಿದ ಕಾರಿನ ಚಾಲಕನು ಕಾರನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





