ಬೈಕ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಉಡುಪಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಪುತ್ತೂರು ಎಲ್.ವಿ.ಟಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 16ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಗೌರಮ್ಮ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸುಹಾನ್ ಶೇಖ್ ಮತ್ತು ಸಹ ಸವಾರ ಅಬ್ದುಲ್ ರೋಹನ್ ಗಾಯ ಗೊಂಡು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.
ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆಯನ್ನು ದಾಟುತ್ತಿದ್ದ ಗೌರಮ್ಮಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗೌರಮ್ಮ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





