Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೋಡಿ ಮಾಡದ ಬಗರ್‌ಹುಕುಂ ಜಮೀನುಗಳನ್ನು...

ಪೋಡಿ ಮಾಡದ ಬಗರ್‌ಹುಕುಂ ಜಮೀನುಗಳನ್ನು ಸರಕಾರದ ವಶಕ್ಕೆ ಪಡೆಯಲು ಚಿಂತನೆ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ17 May 2025 9:17 PM IST
share
ಪೋಡಿ ಮಾಡದ ಬಗರ್‌ಹುಕುಂ ಜಮೀನುಗಳನ್ನು ಸರಕಾರದ ವಶಕ್ಕೆ ಪಡೆಯಲು ಚಿಂತನೆ: ಉಡುಪಿ ಡಿಸಿ

ಉಡುಪಿ: ಸರ್ವೆ ಇಲಾಖೆಗೆ ಸಹಕರಿಸದೆ ಪೋಡಿ ಮಾಡದ ಬಗರ್‌ಹುಕುಂ ಜಮೀನುಗಳನ್ನು ಸರಕಾರದ ವಶಕ್ಕೆ ಪಡೆಯುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಅಕ್ರಮ ಸಕ್ರಮದಲ್ಲಿ ಮಂಜೂರಾಗಿರುವ ಬಗರ್ ಹುಕುಂ ಜಮೀನುಗಳ ಪೋಡಿ ಮಾಡುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದ್ದು, ಅದರಂತೆ ಪೋಡಿ ಆಂದೋಲನದ ಮೂಲಕ ಸರ್ವೆ ಇಲಾಖೆಯಿಂದ ಸರ್ವೆ ಮಾಡಲಾಗುತ್ತಿದೆ. ಆದರೆ ಕೆಲವರು ಈ ಬಗ್ಗೆ ಸರ್ವೆ ಮಾಡಿಕೊಳ್ಳುತ್ತಿಲ್ಲ ಮತ್ತು ಸಹಕಾರ ಕೂಡ ನೀಡುತ್ತಿಲ್ಲ ಎಂದರು.

ಈಗ ಸರಕಾರವೇ ಉಚಿತವಾಗಿ ಸರ್ವೆ ಮಾಡುತ್ತಿದೆ. ಬಗರ್‌ಹುಕುಂ ಸಾಗುವಳಿದಾರರು ಈಗ ಮಾಡಿಸಿಕೊಳ್ಳದಿದ್ದರೆ ಮುಂದೆ ಪ್ರತ್ಯೇಕವಾಗಿ ಅರ್ಜಿ ಹಾಕಿ ಸರ್ವೆ ಮಾಡಿಸಿಕೊಳ್ಳಲು ಕಷ್ಟವಾಗುತ್ತದೆ. ಪೋಡಿ ಮಾಡಿದರೆ ಸರಕಾರದ ಭಾಗವಾಗಿದ್ದ ಈ ಜಮೀನಿಗೆ ಖಾಸಗಿ ಆಗಿ ಅವರದ್ದೇ ಹೊಸ ಸರ್ವೆ ನಂಬರ್ ಸಿಗುತ್ತದೆ. ಇದರಿಂದ ಬಗರ್‌ಹುಕುಂ ಸಾಗುವಳಿದಾರರು ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ 8000 ಸರ್ವೆ ನಂಬರ್‌ನಲ್ಲಿ ಜಮೀನು ಮಂಜೂರಾತಿ ಯಾಗಿದೆ. 5041 ಸರ್ವೆ ನಂಬರ್ ಸ್ಕ್ಯಾನ್ ಆಗಿ ಬಗರ್‌ಹುಕುಂ ಆ್ಯಪ್‌ಗೆ ಅಪ್‌ಲೋಡ್ ಆಗಿದೆ. ಅದರಲ್ಲಿ ಸುಮಾರು 2500 ಸರ್ವೆ ನಂಬರ್‌ಗಳನ್ನು ತಹಶೀಲ್ದಾರ್ ಸರ್ವೆ ಕಳುಹಿಸಿಕೊಟ್ಟಿದ್ದಾರೆ. ಈಗಾಗಲೇ 1000 ಸರ್ವೆ ನಂಬರ್ ಅಳತೆ ಮಾಡಿ ಆರ್‌ಟಿಸಿ ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮಂಜೂರಾತಿಯಾದ ಜಮೀನುನನ್ನು ಬಳಕೆ ಮಾಡದಿದ್ದರೆ ಹಾಗೂ ಪೋಡಿಗೆ ಸಹಾಕರ ನೀಡದಿದ್ದರೆ ಅಂತಹ ಜಮೀನನ್ನು ಸರಕಾರದ ವಶಕ್ಕೆ ಪಡೆಯಲು ಕಾನೂನಿನಲ್ಲಿ ಅವಕಾಶ ಇದೆ. ಆ ಬಗ್ಗೆ ಚಿಂತನೆ ಮಾಡ ಬೇಕಾಗುತ್ತದೆ. ಆದುದರಿಂದ ಬಗರ್‌ಹುಕುಂ ಸಾಗುವಳಿದಾರರು ಈ ಆಂದೋಲನದಲ್ಲಿ ಕೈಜೋಡಿಸಿ ಸರ್ವೆಯರ್ ಜೊತೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X