Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳಲ್ಲಿರುವ ಶಕ್ತಿಯನ್ನು ಸಮಾಜದ...

ಮಕ್ಕಳಲ್ಲಿರುವ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕಾಗಿದೆ: ಡಾ.ನಿಕೇತನಾ

ವಾರ್ತಾಭಾರತಿವಾರ್ತಾಭಾರತಿ18 May 2025 9:55 PM IST
share
ಮಕ್ಕಳಲ್ಲಿರುವ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕಾಗಿದೆ: ಡಾ.ನಿಕೇತನಾ

ಮಂಗಳೂರು: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ನೀರೆರೆದು ಪೋಷಿಸಿ ಹೆಮ್ಮರವಾಗಿ ಬೆಳೆಸುವಲ್ಲಿ ಹಿರಿಯರ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಅಜ್ಜರಕಾಡು ಡಾ.ಜಿ ಶಂಕರ್ ಸರಕಾರಿ ಹೆಣ್ಮಕ್ಕಳ ಪ್ರಥಮ ದರ್ಜೆ ಕಾಲೇಜ್ ನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನಿಕೇತನಾರವರು ಅಭಿಪ್ರಾಯಪಟ್ಟಿದ್ದಾರೆ.

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಇವುಗಳ ಜಂಟಿ ಆಶ್ರಯ ದಲ್ಲಿ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ಸಭಾಂಗಣದಲ್ಲಿ ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಚಿಣ್ಣರ ಕಲರವ - 2025 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಆದರೆ ಭವಿಷ್ಯತ್ತಿನ ಹರಿಕಾರರಾದ ಮಕ್ಕಳ ಮೇಲೆ ನಡೆಯುತ್ತಿರುವ ಪ್ರಜ್ಞಾಪೂರ್ವಕ ದಾಳಿಯಿಂದಾಗಿ ಮಕ್ಕಳ ಭವಿಷ್ಯ ಅಡಕತ್ತರಿಯಲ್ಲಿ ಸಿಲುಕುವಂತಾಗಿದೆ.ಅಂತಹ ಮಕ್ಕಳಿಗೆ ಪ್ರೀತಿಯ ಧಾರೆ ಎರೆಯುವ ಮೂಲಕ ಅವರಲ್ಲಿರುವ ಅಪಾರ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳುವಂತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಕೇರಳ ಬಾಲಸಂಘದ ರಾಜ್ಯ ಸಮಿತಿ ಸದಸ್ಯರಾದ ಭಾರತಿ ಎಸ್ ರವರು ಮಾತನಾಡಿ, ತಿಹಾಸಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ವಾಸ್ತವ ಜಗತ್ತಿನಲ್ಲಿ ಕಾರ್ಯಾಚರಿಸಿ ಭವಿಷ್ಯದ ಬದುಕನ್ನು ಕಟ್ಟಬೇಕಾದ ಎಳೆಯ ಮಕ್ಕಳಲ್ಲಿ ಪ್ರಜ್ಞಾಪೂರ್ವಕವಾಗಿ ಇತಿಹಾಸವನ್ನು ತಿರುಚಿ ಸುಳ್ಳುಗಳನ್ನು ಸ್ರಷ್ಟಿಸಿ, ಮೂಢನಂಬಿಕೆಗಳನ್ನು ವೈಭವೀಕರಿಸಿ ಅರಾಜಕತೆಯನ್ನುಂಟು ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಪ್ರಬಲ ಧ್ವನಿಯನ್ನು ಮೊಳಗಿಸಬೇಕು.ಆ ಮೂಲಕ ಚರಿತ್ರೆಯನ್ನು ಅರಿತು ವೈಜ್ಞಾನಿಕ ಮನೋಭಾವವನ್ನು ಎಳೆಯ ಪ್ರಾಯದ ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಮಾತನಾಡಿ, ಏನೂ ತಿಳಿಯದ ಮುಗ್ಧ ಮನಸುಗಳಿಗೆ ಪ್ರೀತಿ ನೀಡುವ ಮೂಲಕ ಅವರು ಮತ್ತೆ ಸಮಾಜಕ್ಕೆ ಪ್ರೀತಿಯನ್ನು ನೀಡುವಲ್ಲಿ ಸಮಾಜದ ಎಲ್ಲಾ ವರ್ಗದ ಜನತೆ ಒಂದಾಗಬೇಕಾಗಿದೆ ಹಾಗೂ ಮಕ್ಕಳ ಮನಸನ್ನು ಅರಿಯುವ ವಿಶಾಲ ಹ್ರದಯ ಪ್ರತಿಯೊಬ್ಬರಲ್ಲಿ ಇರಬೇಕಾಗಿದೆ ಎಂದು ಹೇಳಿದರು.

ವಿಮಾ ನೌಕರರ ಸಂಘಟನೆಯ ಮುಖಂಡರಾದ ಅಲ್ಬನ್ ಮಸ್ಕರೇನಸ್ ಕಾರ್ಯಕ್ರಮಕ್ಕೆ ಶುಭಕೋರಿ ಮಾತನಾಡಿದರು.

ಚಿಣ್ಣರ ಚಾವಡಿ ಸಂಚಾಲಕರಾದ ಸುನಿಲ್ ಕುಮಾರ್ ಬಜಾಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸಾಮಾಜಿಕ ಚಿಂತಕರಾದ ಡಾ.ಲಯನ್ ಓಸ್ವಾಲ್ಡ್ ಪುರ್ತಾಡೋ,ವಿದ್ಯಾ ಶೆಣೈ, ನೀನಾಸಂ ಪದವೀಧರರಾದ ಮೈಟಿ ಗಿಬ್ಸನ್,ಯುವ ಉದ್ಯಮಿಗಳಾದ ಸಿರಾಜ್ ಮಂಜೇಶ್ವರ, ಶಿಬಿರದ ನಿರ್ದೇಶಕರಾದ ಪ್ರವೀಣ್ ವಿಸ್ಮಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X