Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಲೆಮಾರಿ ಸಮುದಾಯ ಕಾಲೋನಿಗಳಿಗೆ ಮೂಲಭೂತ...

ಅಲೆಮಾರಿ ಸಮುದಾಯ ಕಾಲೋನಿಗಳಿಗೆ ಮೂಲಭೂತ ಸೌಕರ್ಯ: ಉಡುಪಿ ಡಿಸಿ ವಿದ್ಯಾಕುಮಾರಿ

ರಾಜ್ಯ ಸರಕಾರಕ್ಕೆ 11 ಕೋ.ರೂ. ಅನುದಾನ ಪ್ರಸ್ತಾಪ

ವಾರ್ತಾಭಾರತಿವಾರ್ತಾಭಾರತಿ19 May 2025 7:56 PM IST
share
ಅಲೆಮಾರಿ ಸಮುದಾಯ ಕಾಲೋನಿಗಳಿಗೆ ಮೂಲಭೂತ ಸೌಕರ್ಯ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ, ಮೇ 19: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯ ದವರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳಿಗೆ ಕಾಂಕ್ರೀಟ್ ರಸ್ತೆ, ಚರಂಡಿ ಸೇರಿದಂತೆ ಮೊದಲಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ರಾಜ್ಯ ಸರಕಾರಕ್ಕೆ 11 ಕೋಟಿ ರೂ. ವೆಚ್ಚದ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕುಟುಂಬದವರಿದ್ದು, 2600ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರುಗಳು ಈ ಹಿಂದೆ ಇತರೆ ಪ್ರದೇಶಗಳಿಂದ ಜಿಲ್ಲೆಗೆ ಬಂದವರಾಗಿದ್ದು ಜೋಗಿ, ಗೊಲ್ಲ, ದೊಂಬಿದಾಸ ಹಾಗೂ ದರ್ವೇಶ್ ಜಾತಿಗೆ ಸೇರಿದವರಾಗಿದ್ದಾರೆ. ಇವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳನ್ನು ಮಾಡಬೇಕಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಈ ಸಮುದಾಯದವರು ಶಿಕ್ಷಣವಂತರಾಗುತ್ತಿದ್ದಾರೆ. ಒಂದೆಡೆ ನೆಲೆಸಿ, ಕೃಷಿ ಚಟುವಟಿಕೆ, ಸ್ವಯಂ ಉದ್ಯೋಗ ಮತ್ತಿತರ ಕಾರ್ಯ ಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಸರಕಾರ ಇವರುಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಸಹಾಯ ಸೇರಿದಂತೆ ಮತ್ತಿತರ ಸೌಲಭ್ಯಗಳು ಪಡೆಯಲು ಹೆಚ್ಚು ಅರ್ಜಿಗಳು ಬರುತ್ತಿವೆ. ಪ್ರಸ್ತುತ ಇರುವ ಗುರಿಗಿಂತ ಹೆಚ್ಚು ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು.

ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಸರಕಾರದ ವಿವಿಧ ಯೋಜನೆಯಡಿ ಕಲ್ಪಿಸಬೇಕು. ನಿವೇಶನ ರಹಿತರುಗಳಿಗೆ ನಿವೇಶನ ಒದಗಿಸಲು ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಸಲ್ಲಿಸಿ, ಇರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಮಾಹಿತಿ ನೀಡಬೇಕು ಎಂದರು.

ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಸೇರಿದಂತೆ ಮತಿತಿತರ ಯೋಜನೆಗಳು ರೂಪಿಸಲಾಗಿದ್ದು, ಇದು ಪೂರ್ಣಪ್ರಮಾಣದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು.

ಕರಾವಳಿ ಭಾಗದಲ್ಲಿರುವ ಈ ಸಮುದಾಯದವರು ಶೈಕ್ಷಣಿಕವಾಗಿ ಮುಂದುವರೆದಿದ್ದಾರೆ. ಸಮುದಾಯದ ಅಸಂಘಟಿತ ಕಾರ್ಮಿಕರುಗಳಿಗೆ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಗುರುತಿನ ಚೀಟಿಯನ್ನು ನೀಡುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಸಮಿತಿಯ ಸದಸ್ಯರುಗಳು ಮೊದಲಾದವರು ಉಪಸ್ಥಿತರಿದ್ದರು.

‘ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯ ಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದ ರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು’

-ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X