ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು

ಕೋಟ: ಕಾರೊಂದು ಸೈಕಲ್ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಬಾಳ್ಕುದ್ರು ಗ್ರಾಮದ ಮಾಬುಕಳ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 18ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಹರಿಶ್ಚಂದ್ರ (49) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಎದುರಿನಲ್ಲಿ ಹರಿಶ್ಚಂದ್ರ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸೈಕಲ್ಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story