ಆಸ್ಪತ್ರೆಯ ವಾರ್ಡ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಕೋಟ, ಜೂ.1: ವಿಪರೀತ ಮದ್ಯ ಸೇವನೆ ಚಟದಿಂದ ಕೋಟ ಪರಿವರ್ತನಾ ಪುನರ್ ವಸತಿ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೋಟೇಶ್ವರದ ಕುಮಾರ(48) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಮೇ 31ರಂದು ರಾತ್ರಿ ಆಸ್ಪತ್ರೆಯ ವಾರ್ಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





