ಉಡುಪಿ: ಪರಿಸರ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ಉಡುಪಿ, ಜೂ.3: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ-2025ರ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯು ಇಂದು ನಗರದ ಕೆ.ಎಂ.ಮಾರ್ಗದಲ್ಲಿರುವ ಸೈಂಟ್ ಮೇರೀಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಶಾಲಾ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಪರಿಸರದ ನೂರಾರು ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
Next Story





