ಹಿರಿಯ ವ್ಯಕ್ತಿ ನಾಪತ್ತೆ

ಉಡುಪಿ, ಜೂ.4: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಪೊಮ್ಮು (57) ಎಂಬವರು ಜೂನ್ 2ರಂದು ಆಸ್ಪತ್ರೆಯಿಂದ ಯಾರಿಗೂ ಹೇಳದೇ ಹೋದವರು ಈವರೆಗೆ ಮನೆಗೂ ವಾಪಾಸಾಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
Next Story





