Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಕ್ರೀದ್ ಆಚರಣೆ ಶಾಂತಿ, ಸೌಹಾರ್ದಯುತವಾಗಿ...

ಬಕ್ರೀದ್ ಆಚರಣೆ ಶಾಂತಿ, ಸೌಹಾರ್ದಯುತವಾಗಿ ನಡೆಯಲಿ: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ4 Jun 2025 8:53 PM IST
share
ಬಕ್ರೀದ್ ಆಚರಣೆ ಶಾಂತಿ, ಸೌಹಾರ್ದಯುತವಾಗಿ ನಡೆಯಲಿ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ, ಜೂ.4: ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಶಾಂತಿ ಮತ್ತು ಸೌಹಾರ್ದ ಯುತವಾಗಿ ನಡೆಯುವಂತೆ ಪ್ರತಿಯೊಬ್ಬರು ಸಹಕರಿಸಬೇಕು. ಈ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತ ವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ಬುಧವಾರ ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ಸಮೀಪದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗದಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಆಯಾ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿ ರುತ್ತದೆ ಎಂದು ಅವರು ವಿವರಿಸಿದರು.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ, ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ ಮಾಡುವ ಸಾಧ್ಯತೆ ಇರುವುದರಿಂದ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆ ಯಾದ್ಯಂತ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಇದಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದ ಅವರು, ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ತಂಡಗಳು ಸಭೆ ಸೇರಿ, ಇವುಗಳ ನಿಯಂತ್ರಣ ಕಾರ್ಯದ ಬಗ್ಗೆ ಚರ್ಚಿಸಿ, ಕ್ರಮವಹಿಸಬೇಕು ಎಂದರು.

ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರು ಗಳನ್ನು ಸಂರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಲು ಸಮೀಪದ ಗೋಶಾಲೆ ಗಳನ್ನು ಗುರುತಿಸುವಂತೆ ಹಾಗೂ ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆ ನೀಡಲು ಪಶುವೈದ್ಯಾಧಿಕಾರಿಗಳು ಸನ್ನದ್ಧರಾಗಿರಬೇಕು. ಅಲ್ಲದೇ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆ ಯನ್ನು ಕಲ್ಪಿಸಬೇಕೆಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಬಕ್ರೀದ್ ಹಬ್ಬ ಶಾಂತಿ ಮತ್ತು ಸೌಹಾರ್ದಯುತವಾಗಿ ಜಿಲ್ಲೆಯಲ್ಲಿ ನಡೆಯಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರುಗಳು ಶಾಂತಿ ಸಭೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಜಿಲ್ಲೆಯಾದ್ಯಂತ ತಪಾಸಣಾ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿವೆ. ಈ ಕೇಂದ್ರಗಳು ಜಾನುವಾರು ಸಾಗಾಣಿಕೆ ಮಾಡುವ ಕುರಿತು ಹೆಚ್ಚಿನ ನಿಗಾ ವಹಿಸಲಾಗುತ್ತವೆ. ಕಾನೂನು ಉಲ್ಲಂಘನೆ ಮಾಡಿ ಜಾನುವಾರು ಸಾಗಣಿಕೆ ಮಾಡಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ನಗರಸಭೆ ಆಯುಕ್ತ ಮಹೇಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X