ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಕಾರ್ಕಳ, ಜೂ.4: ಅನಾರೋಗ್ಯದಿಂದ ಬಳಲುತ್ತಿದ್ದ ಕೌಡೂರು ಗ್ರಾಮದ ಗಡದಲ್ಕೆ ನಿವಾಸಿ ಎಲಜಿಬೆತ್ ಡಿಸೋಜ(74) ಎಂಬವರು ಮನನೊಂದು ಜೂ.3ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ಆಜ್ರಿ ಗ್ರಾಮದ ರಘುರಾಮ ಎಂಬವರ ಮಗ ಚಂದ್ರ (48) ಎಂಬವರು ಜೂ.4ರಂದು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮಕ್ಕಳು ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿರುವ ಬಗ್ಗೆ ಮನನೊಂದ ಕಾಂತಾವರ ಗ್ರಾಮದ ಗಿರಿಜ(59) ಎಂಬವರು ಜೂ.3ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





