ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಭೇಟಿ

ಉಡುಪಿ, ಜೂ.5: ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರನ್ನು ಉಡುಪಿ ವಕೀಲರ ಸಂಘದ ನಿಯೋಗವು ಇಂದು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದಿಸಿತು.
ಉಡುಪಿ ವಕೀಲರ ಸಂಘವು ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಆಯೋಜಿಸಿರುವ ತರಬೇತಿ ಕಾರ್ಯಕ್ರಮ ವನ್ನು ಉದ್ಘಾಟಿಸುವಂತೆ ಅವರನ್ನು ಆಹ್ವಾನಿಸಲಾಯಿತು.
ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಂಟಿ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಕಾರ್ಯಕಾರಿ ಸಮಿತಿ ಸದಸ್ಯ ಪ್ರಜ್ವಲ್ ಶೆಟ್ಟಿ, ವಕೀಲರಾದ ಮೊಹಮ್ಮದ್ ರಫೀಕ್ ಖಾನ್ ಮತ್ತು ಶರತ್ ಕುಂದರ್ ಉಪಸ್ಥಿತರಿದ್ದರು.
Next Story





