Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿದ್ದಾಪುರ-ಹೊಸಂಗಡಿ ಪರಿಸರದಲ್ಲಿ...

ಸಿದ್ದಾಪುರ-ಹೊಸಂಗಡಿ ಪರಿಸರದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ಕೊನೆಗೂ ಸೆರೆ

► ಆರು ಪಳಗಿದ ಆನೆಗಳ ಬಳಕೆ ►150ಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ಶ್ರಮ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ5 Jun 2025 10:01 PM IST
share
ಸಿದ್ದಾಪುರ-ಹೊಸಂಗಡಿ ಪರಿಸರದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ಕೊನೆಗೂ ಸೆರೆ

ಕುಂದಾಪುರ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗದ ಗ್ರಾಮ ಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವುದರಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

ಗುರುವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ಸಿದ್ದಾಪುರ ಸಮೀಪದ ಹೆನ್ನಾಬೈಲಿನ ಉರಪಾಲ್ ಎಂಬಲ್ಲಿ ಇಲಾಖೆಯ ಅರವಳಿಕೆ ತಜ್ಞರು ನೀಡಿದ್ದ ಅರವಳಿಕೆ ಮದ್ದಿಗೆ ಸ್ಪಂದಿಸಿರುವ ಗಜರಾಜ ಧರಶಾಹಿಯಾಗಿದೆ. ಬಳಿಕ ಆರು ಆನೆಗಳ ಸಹಕಾರದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ.

ಮಂಗಳವಾರ ಸಂಜೆಯ ಬಳಿಕ ಬಾಳೆಬರೆ-ಸಿದ್ದಾಪುರ ಮಾರ್ಗವಾಗಿ ಘಾಟಿಯಿಂದ ಕೆಳಕ್ಕೆ ಬಂದಿದ್ದ ಕಾಡಾನೆಯ ಚಲನವಲನಗಳನ್ನು ರೆಡಿಯೋ ಕಾಲರ್ ಹಾಗೂ ಜಿಪಿಎಸ್ ತಂತ್ರಜ್ಞಾನದ ಮೂಲಕ ತಿಳಿದುಕೊಳ್ಳುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಕಾಡಾನೆಯನ್ನು ಸೆರೆ ಹಿಡಿಯಲು ಕಾರ್ಯತಂತ್ರವನ್ನು ರೂಪಿಸಿದ್ದರು.

ಶಿವಮೊಗ್ಗದ ಸಕ್ರೆಬೈಲಿನಿಂದ ಬಂದಿದ್ದ ಕಾರ್ಯಪಡೆ ಮಾರ್ಗದರ್ಶನದಲ್ಲಿ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳ ಹಾಗೂ ಸಿಬ್ಬಂದಿಗಳು ಆನೆಯನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆಗೆ ರೂಪುರೇಷೆ ಸಿದ್ಧಪಡಿಸಿಕೊಂಡು ಗುರುವಾರ ಮಧ್ಯಾಹ್ನ ಕಾರ್ಯಪ್ರವೃತ್ತರಾದರು.

ಒಂಟಿ ಸಲಗನನ್ನು ವಶಕ್ಕೆ ಪಡೆದುಕೊಳ್ಳುವ ಕಾರ್ಯಾಚರಣೆಯ ಮೊದಲ ಭಾಗವಾಗಿ ಅರವಳಿಕೆ ತಜ್ಞರನ್ನು ಹಾಗೂ ಮೂರು ಪಳಗಿದ ಆನೆಗಳನ್ನು, ಸಕ್ರೆಬೈಲು ಆನೆ ಬಿಡಾರದಿಂದ ತರಿಸಲಾಗಿತ್ತು. ಗುರುವಾರ ಮಧ್ಯಾಹ್ನ ವೇಳೆಗೆ ಕಾರ್ಯಾಚರಣೆಗಾಗಿ ಮೂರು ವಾಹನದ ಮೂಲಕ ಗುರುವಾರ ಸಿದ್ದಾಪುರಕ್ಕೆ ಬಂದಿದ್ದ ಬಾಲಣ್ಣ, ಸೋಮಣ್ಣ ಹಾಗೂ ಬಹದ್ದೂರು ಹೆಸರಿನ ಮೂರು ಪಳಗಿಸಿದ ಆನೆಗಳನ್ನು ಕರೆತರಲಾಯಿತು.


ಕಾರ್ಯಾಚರಣೆ ಹೇಗೆ?: ಸಿದ್ದಾಪುರ ಪೇಟೆ ಸುಮಾರು 1.2 ಕಿ.ಮೀ ದೂರದಲ್ಲಿ ಹೆನ್ನಾಬೈಲು ಎಂಬಲ್ಲಿ ಆನೆ ಇರುವ ಚಲನವಲನದ ಮಾಹಿತಿ ಪಡೆದುಕೊಂಡಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಲರ್ಟ್ ಆಗಿದ್ದರು. ರಾತ್ರಿಯ ವೇಳೆ ಪರಿಸರದಲ್ಲಿ ಸಂಚಾರ ನಡೆಸಿದ್ದ ಆನೆಯ ನಡಿಗೆ ಮೊಬೈಲ್ ಹಾಗೂ ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್‌ ಕೂಡ ಆಗಿತ್ತು.

ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಲನ್ ಕಾರ್ಯಾಚರಣೆಯ ನೇತೃತ್ವದಲ್ಲಿ ಆನೆ ಸೆರೆ ಕಾರ್ಯಾಚರಣೆಗೆ ಮುಂದಾದ ತಂಡ, ಮೊದಲಿಗೆ ಸಕ್ರೆಬೈಲಿನ ಎರಡು ಪಳಗಿದ ಆನೆಗಳನ್ನು ತಿರುಗಾಟಕ್ಕೆ ಬಿಟ್ಟು, ಹೆನ್ನಾಬೈಲಿನಿಂದ ಗೆದ್ದೋಡಿಗೆ ಸಾಗುವ ಮತ್ತಿಬೇರು ಎಂಬಲ್ಲಿ ಸಂಜೆಯ ವೇಳೆ ಆನೆಯ ಇರುವಿಕೆಯನ್ನು ಪತ್ತೆ ಮಾಡಿ ಅಲ್ಲೊಂದು ಸಾಕಾನೆ ಬಿಟ್ಟು ಕಾರ್ಯಾಚರಣೆಗೆ ಇಳಿದಿದೆ.

ಸಿದ್ದಾಪುರದಿಂದ ಹೆನ್ನಾಬೈಲ್ ಮೂಲಕ ಗೆದ್ದೋಡಿಗೆ ಸಾಗುವ ದಾರಿಯನ್ನು ಸಾರ್ವಜನಿಕ ಪ್ರವೇಶ ನಿರ್ಬಂಧ ಮಾಡಿ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ರಾಜ್ಯ ಹೆದ್ದಾರಿಯನ್ನು ಸುಮಾರು 1.30 ಗಂಟೆಗಳ ಕಾಲ ಸಂಚಾರ ನಿರ್ಬಂಧ ಮಾಡಲಾಗಿತ್ತು. ಕಾರ್ಯಾಚರಣೆ ನಡೆಯುವ ಪರಿಸರದಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು.

ಸಂಜೆಯ 5 ಗಂಟೆಯ ವೇಳೆಗೆ ಮತ್ತಿಬೇರು ಸಮೀಪದ ಉರಾಪಾಲ್ ಎಂಬಲ್ಲಿ ಆನೆಯ ನಿಖರ ಇರುವಿಕೆ ಯನ್ನು ಪತ್ತೆ ಮಾಡಿದ್ದ, ಶಿವಮೊಗ್ಗದ ಡಾ.ಎಸ್‌.ಕಲ್ಲಪ್ಪ, ನಾಗರಹೊಳೆಯ ಡಾ.ರಮೇಶ್ ಹಾಗೂ ಮಂಗಳೂರಿನ ಡಾ.ಯಶಸ್ವಿ ಅವರುಗಳಿದ್ದ ಕಾರ್ಯಾಚರಣೆಯ ವೈದ್ಯರ ತಂಡ ನೀಡಿದ್ದ ಅರವಳಿಕೆ ಮದ್ದಿಗೆ ಗಜರಾಜ ನಿದ್ರಾವಸ್ಥೆಗೆ ಜಾರಿದ್ದಾನೆ. ಆನೆಯ ಸಾಮಾನ್ಯ ತೂಕವನ್ನು ಗಮನಿಸಿ ಅರವಳಿಕೆ ಔಷಧ ನೀಡುವ ಕ್ರಮವಿದ್ದು, ಇಲ್ಲಿ ಎಟಾರ್ಫಿನ್ ಔಷಧಿಯನ್ನು 1.2 ಎಂ.ಎಲ್ ನಷ್ಟು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಔಷಧಿ ದೇಹ ಪ್ರವೇಶಿಸಿದ 7-8 ನಿಮಿಷದ ಒಳಗೆ ಅರೆಪ್ರಜ್ಞಾವಸ್ಥೆಗೆ ತಲುಪುತ್ತದೆ ಎನ್ನುವುದು ಸಾಮಾನ್ಯವಾಗಿದ್ದರೂ, ಇಲ್ಲಿ ಔಷಧಿ ನೀಡಿದ 20 ನಿಮಿಷದ ನಂತರವಷ್ಟೇ ಆನೆ ನಿದ್ರಾವಸ್ಥೆಗೆ ತಲುಪಿದೆ ಎಂದು ವೈದ್ಯರು 'ವಾರ್ತಾಭಾರತಿ'ಗೆ ತಿಳಿಸಿದ್ದಾರೆ.

ಹೆಚ್ಚುವರಿಯಾಗಿ ಸಂಜೆ 7-30 ರ ಸುಮಾರಿಗೆ ನಾಗರಹೊಳೆ ಮತ್ತಿಗೋಡು ಅರಣ್ಯ ವಲಯದಿಂದ ಭೀಮ, ಮಹೇಂದ್ರ ಹಾಗೂ ಏಕಲವ್ಯ ಎನ್ನುವ ಹೆಸರಿನ ಮೂರು ಪಳಗಿದ ಆನೆಗಳನ್ನು ಕಾರ್ಯಾಚರಣೆಗೆ ಕರೆಸಲಾಗಿತ್ತು. ಭೀಮನ ನೇತೃತ್ವದಲ್ಲಿ ನಾಲ್ಕು ಆನೆಗಳ ತಂಡ ಹಾಗೂ ಕ್ರೇನ್ ಸಹಾಯದಿಂದ ನಿದ್ರಾವಸ್ಥೆಯಲ್ಲಿ ಇರುವ ಕಾಡಾನೆಯನ್ನು ಎತ್ತಿ ವಾಹನಕ್ಕೆ ಹಾಕುವ ಕಾರ್ಯಾಚರಣೆಯನ್ನು ಮುಂದುವರೆಸುವ ಕಾರ್ಯ ನಡೆಯಿತು.

ವಾಹನಕ್ಕೆ ಆನೆಯನ್ನು ಸ್ಥಳಾಂತರಿಸಿದ ಬಳಿಕ, ಅದನ್ನು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನ ಆನೆ ಬಿಡಾರಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರಿನಿಂದ ಬಂದಿದ್ದ ಎಟಿಎಫ್ ತಂಡದ ಕಾರ್ಯವೈಖರಿ ಮೆಚ್ಚುಗೆಗೆ ಪಾತ್ರವಾಗಿದೆ. ಹಾಸನದಿಂದ ಅರಣ್ಯ ವಿಭಾಗದಿಂದ ಔಷಧಿಗಳನ್ನು ತರಿಸಿಕೊಳ್ಳಲಾಗಿತ್ತು. ಕಾರ್ಯಾಚರಣೆಯಲ್ಲಿ ಸುಮಾರು 150 ಸಿಬ್ಬಂದಿಗಳು ಭಾಗಿಯಾಗಿದ್ದರು.

ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಲನ್ ಕಾರ್ಯಾಚರಣೆಯ ನೇತ್ರತ್ವ ವಹಿಸಿದ್ದರು. ಕುದುರೆಮುಖ ಅರಣ್ಯ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು, ಕುಂದಾಪುರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಕಾಶ್ ಪೂಜಾರಿ, ದಿನೇಶ್, ಸಕ್ರೆಬೈಲು ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ವಿನಯ್ ಜಿ.ಆರ್, ಸಿದ್ದಾಪುರ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಜಿ.ವಿ. ನಾಯ್ಕ್, ಶಂಕರನಾರಾಯಣ ವಲಯಾರಣ್ಯಾಧಿಕಾರಿ ಜ್ಯೋತಿ, ಶಂಕರನಾರಾಯಣ ಪೊಲೀಸ್ ಠಾಣೆಯ ಎಸ್‌ಐ ನಾಸೀರ್ ಹುಸೇನ್ ಇದ್ದರು. ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್ ಹಾಗೂ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಆಗಮಿಸಿ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿ ಸಭೆ‌ ನಡೆಸಿದರು.

ಕಾಡಾನೆಯಿಂದ ಯಾರಿಗೂ ತೊಂದರೆಯಾಗಬಾರದು ಎನ್ನುವ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದ ಅರಣ್ಯ ಇಲಾಖೆಯ ಮನವಿ ಸ್ಪಂದಿಸಿ ಹೊಸಂಗಡಿ, ಸಿದ್ದಾಪುರ ಹಾಗೂ ಕಮಲಶಿಲೆ ಭಾಗದ ಅಂಗನ ವಾಡಿ ಕೇಂದ್ರ ಹಾಗೂ ಎಸ್‌ಎಸ್‌ಎಲ್‌ಸಿ ವರೆಗಿನ ಶಾಲೆಗಳಿಗೆ ಬುಧವಾರ ಹಾಗೂ ಗುರುವಾರ ರಜೆ ಸಾರಲಾಗಿತ್ತು. ಆನೆ ಇರುವಿಕೆ ಪತ್ತೆಯಾದ ಹೆನ್ನಾಬೈಲು ಹಾಗೂ ಆಸುಪಾಸಿನ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿತ್ತು. ಕಾರ್ಯಾಚರಣೆ ನಡೆಯುವ ವೇಳೆ ಈ ಪರಿಸರದಲ್ಲಿ ಅಘೋಷಿತ ಬಂದ್‌ನಂತಹ ವಾತಾವರಣ ಇತ್ತು.

ಆನೆಯಿಂದ ಸಮಸ್ಯೆ ಆಗಿಲ್ಲ

ಎರಡು ದಿನಗಳಿಂದ ಊರಿಗೆ ಕಾಡಾನೆ ಬಂದು ತಿರಾಗಾಡಿದೆ ಎನ್ನುವ ಆತಂಕಗಳು ಸ್ಥಳಿಯರಲ್ಲಿ ಇದ್ದರೂ, ಯಾರೊಬ್ಬರಿಗೂ ಹಾಗೂ ವಸ್ತುಗಳಿಗೂ ಹಾನಿ ಮಾಡದ ಆನೆಯ ನಡವಳಿಕೆಯ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ರಾಜ್ಯ ಹೆದ್ದಾರಿ, ಪೇಟೆ ಪ್ರದೇಶ, ಜನವಸತಿ ಪ್ರದೇಶ, ತೋಟ, ಕೃಷಿ ಗದ್ದೆ ಹಾಗೂ ಅರಣ್ಯ ಪ್ರದೇಶದಲ್ಲಿ ಸುತ್ತಾಟ ನಡೆಸಿದ್ದ ಕಾಡಾನೆ ಯಾರಿಗೂ ತೊಂದರೆ ನೀಡಿರಲಿಲ್ಲ. ಬುಧವಾರ ರಾತ್ರಿಯಯಂತೂ ಮನೆಗಳ ಸನಿಹವೇ ಆನೆ ತಿರುಗಾಡಿದ್ದು ಅತ್ಯಂತ ಸನಿಹದಿಂದಲೇ ಮೊಬೈಲ್ ಶೂಟಿಂಗ್ ಮಾಡಿದ್ದರೂ ಅವರ ತಂಟೆಗೆ ಹೋಗದ ಆನೆಯ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿ ಮುಂದೆ ಸಾಗಿತ್ತು.

"ದೊಡ್ಡ ಗುಂಪಿನ ಜೊತೆ ಸೇರಿಕೊಂಡಿದ್ದ ಗಂಡಾನೆ ಯಾವುದೋ ಗಲಾಟೆಯಿಂದ ಗುಂಪಿನಿಂದ ಬೇರೆಯಾಗಿದೆ. ಕತ್ತಲೆಯಾಗುವ ಮೊದಲೇ ಅರವಳಿಕೆ ಮದ್ದು ನೀಡಲಾಗಿದೆ. 6 ಆನೆಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯಲಿದೆ".

-ಕರಿಕಾಲನ್ (ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ)





share
ವಾರ್ತಾಭಾರತಿ
ವಾರ್ತಾಭಾರತಿ
Next Story
X