ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮಕ್ಕೆ ಯುವ ಕಾಂಗ್ರೆಸ್ ಎಸ್ಪಿಗೆ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದ ನಿಯೋಗ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು.
ಉಡುಪಿ ಜಿಲ್ಲಾದ್ಯಂತ ಶಾಂತಿ ನೆಲೆಸಲು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ನಿಯೋಗ ತಿಳಿಸಿತು. ಸಮಾಜಘಾತುಕ ಶಕ್ತಿಗಳು ಯಾವುದೇ ಜಾತಿ, ಧರ್ಮ, ಪಕ್ಷವಿರಲಿ, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಆ ಮೂಲಕ ಜಿಲ್ಲೆಯಲ್ಲಿ ಸೌಹಾರ್ದತೆ ಮತ್ತು ಶಾಂತಿ ನೆಲೆಸುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿಯೋಗ ಮನವಿ ಮಾಡಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಆತೀಫ್, ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶೆಟ್ಟಿ, ಮಮತಾ ನಾಯ್ಕ್, ಸಂಜಯ್ ಆಚಾರ್ಯ, ಪ್ರವೀಣ್ ಬಾರ್ಕೂರು, ಸ್ಟೀಫನ್ ಪ್ರಖ್ಯಾತ್ ಮೊದಲಾದವರು ಉಪಸ್ಥಿತರಿದ್ದರು.
Next Story