ಆಟೋರಿಕ್ಷಾಗಳಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಅಧಿಕ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ

ಸಾಂದರ್ಭಿಕ ಚಿತ್ರ
ಉಡುಪಿ, ಜೂ.10: ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗದಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಅಟೋ ಚಾಲಕರು ಹಾಗೂ ಮಾಲಕರಿಗೆ ತಿಳಿಸಿದ್ದಾರೆ.
ಖಾಸಗಿ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಂದ ಬಾಡಿಗೆ ಪಡೆದು ಬಾಡಿಗೆ ಮಾಡದಂತೆ ಎಲ್ಲಾ ಖಾಸಗೀ ವಾಹನಗಳ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹ ವಾಹನಗಳು, ಚಾಲಕರು ಹಾಗೂ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story