Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೇಂದ್ರ ಜಲಸಂಪನ್ಮೂಲ ಸಚಿವಾಲಯದಿಂದ...

ಕೇಂದ್ರ ಜಲಸಂಪನ್ಮೂಲ ಸಚಿವಾಲಯದಿಂದ ಜಿಲ್ಲೆ ನೀರಿನಾಸರೆಗಳ ಗಣತಿ: ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ10 Jun 2025 8:16 PM IST
share
ಕೇಂದ್ರ ಜಲಸಂಪನ್ಮೂಲ ಸಚಿವಾಲಯದಿಂದ ಜಿಲ್ಲೆ ನೀರಿನಾಸರೆಗಳ ಗಣತಿ: ಡಿಸಿ ವಿದ್ಯಾಕುಮಾರಿ

ಉಡುಪಿ, ಜೂ.10: ರಾಷ್ಟ್ರ ಮಟ್ಟದಲ್ಲಿ ನೀರಾವರಿ ನೀತಿಗಳನ್ನು ರೂಪಿಸಲು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ವತಿಯಿಂದ 7ನೇ ಸಣ್ಣ ನೀರಾವರಿ ಗಣತಿ ಹಾಗೂ ನೀರಿನ ಮೂಲಗಳ ಸಮೀಕ್ಷೆ ಜೂನ್‌ ತಿಂಗಳಿಂದ ಅಕ್ಟೋಬರ್ ಅಂತ್ಯದವರೆಗೆ ನಡೆಯಲಿದ್ದು, ಸಾರ್ವಜನಿಕರು ಈ ಗಣತಿಗೆ ಸಂಪೂರ್ಣ ಸಹಕಾರ ನೀಡುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಮಂಗಳವಾರ ನಡೆದ ಏಳನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಕಾರ್ಯಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸಮೀಕ್ಷೆಯ ವೇಳೆ ಜಿಲ್ಲೆಯ ಎಲ್ಲಾ ವಿಧದ ಸಣ್ಣ ನೀರಾವರಿ ಯೋಜನೆಗಳ, ನೀರಿನ ಆಸರೆಗಳ ಸಮಗ್ರ ಹಾಗೂ ನಂಬಲರ್ಹ ಮೂಲಗಳ ಅಂಕಿ-ಅಂಶಗಳ ಸಂಗ್ರಹಣೆ, ಭವಿಷ್ಯದಲ್ಲಿ ಅವುಗಳ ಸದ್ಬಳಕೆ, ನಿರ್ವಹಣೆ ಹಾಗೂ ಆದಾಯ ಸಂಗ್ರಹಣೆ, ಹೊಸ ಯೋಜನೆಗಳಿಗೆ ರೂಪ ಕೊಡುವುದು ಸೇರಿದಂತೆ ಪರಿಣಾಮಕಾರಿ ಯೋಜನೆಗಳು ಮತ್ತು ನೀತಿಗಳ ನಿರೂಪಣೆ ಕೈಗೊಳ್ಳಲು ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆ ಗಳ ಗಣತಿಯಿಂದ ಅನುಕೂಲವಾಗಲಿದೆ ಎಂದವರು ಹೇಳಿದರು.

ನೀರಿನಾಸರೆಗಳ ಗಣತಿಯಲ್ಲಿ ನೈಸರ್ಗಿಕ ಹಾಗೂ ಮಾನವ ನಿರ್ಮಿತ ಎಲ್ಲಾ ನೀರಿನ ಆಸರೆಗಳ, ಅಚ್ಚುಕಟ್ಟುಗಳ ಪ್ರಮಾಣ ಲೆಕ್ಕಿಸದೇ ಮಾಹಿತಿ ಸಂಗ್ರಹಿ ಸಲಾಗುತ್ತದೆ ಎಂದ ಅವರು, ಗ್ರಾಮ ಹಾಗೂ ನಗರ ಅಂತರ್ಜಲ ಯೋಜನೆ ಗಳಾದ ಅಗೆದ ಬಾವಿ, ವಿವಿಧ ಕೊಳವೆ ಬಾವಿಗಳ ಮಾಹಿತಿ, ಜಲ ಯೋಜನೆ ಗಳಾದ ನೀರಿನ ಮೇಲ್ಮೈ ಹರಿವು ಹಾಗೂ ಏತ ನೀರಾವರಿ ಯೋಜನೆಗಳನ್ನು ಒಳಗೊಂಡಿರು ವಂತೆ ಮಾಹಿತಿ ಕಲೆ ಹಾಕಲಾಗುತ್ತದೆ ಎಂದರು.

ನೀರಾವರಿ ಅಥವಾ ಇತರೆ ಉದ್ದೇಶಗಳಾದ ಕೈಗಾರಿಕೆ, ಮೀನುಗಾರಿಕೆ, ಕುಡಿಯುವ ನೀರು, ಆಟೋಟ ಮನೋರಂಜನೆ, ಧಾರ್ಮಿಕ ಅಂತರ್ಜಲ ಪುನಃಶ್ಚೇತನ, ಕೃಷಿ ಹೊಂಡ ಮುಂತಾದವುಗಳಲ್ಲಿ ಬಳಕೆ ಯಾಗುವ ಎಲ್ಲಾ ನೀರಿನ ಆಸರೆಗಳನ್ನು ಈ ಗಣತಿಯಲ್ಲಿ ಪರಿಗಣಿಸಲಾಗುವುದು ಎಂದರು.

ಗಣತಿಯ ಅನುಷ್ಠಾನ ಕಾರ್ಯದಲ್ಲಿ ಭಾಗಿಯಾಗುವ ಗ್ರಾಮ ಲೆಕ್ಕಿಗರಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ನೌಕರರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಾರ್ಯಾಗಾರಗಳನ್ನು ಏರ್ಪಡಿಸಿ, ಅವರಿಗೆ ತರಬೇತಿ ನೀಡಬೇಕು ಎಂದ ಜಿಲ್ಲಾಧಿಕಾರಿ, ತಾಲೂಕು ಮಟ್ಟದಲ್ಲಿ ಮೇಲ್ವಿಚಾರಕ ರಾದ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಸಾಂಖಿಕ ನಿರೀಕ್ಷಕರು ಗಣತಿ ಕಾರ್ಯದ ಮೇಲ್ವಿಚಾರಣೆಯನ್ನು ಮಾಡಬೇಕು. ನಿಯಮಿತವಾಗಿ ಶೇ.10 ರಷ್ಟು ಯೋಜನೆಯನ್ನು ಆಯ್ಕೆ ಮಾಡಿ, ಭೌತಿಕವಾಗಿ ಸಂದರ್ಶಿಸಿ ಮತ್ತು ಗುಣಮಟ್ಟ ಹಾಗೂ ವ್ಯಾಪ್ತಿಯ ನೈಜತೆಯನ್ನು ಪರಿಶೀಲಿಸಬೇಕು ಎಂದರು.

6ನೇ ಸಣ್ಣ ನೀರಾವರಿ ಗಣತಿ ದತ್ತಾಂಶದ ಅನ್ವಯ ಜಿಲ್ಲೆಯಲ್ಲಿ ಒಟ್ಟು 257 ಗ್ರಾಮಗಳಲ್ಲಿ 18,290 ಅಂತರ್ಜಲ ಯೋಜನೆಗಳು, 181 ಮೇಲ್ಮೈ ಜಲಹರಿಯುವ ಯೋಜನೆಗಳು ಮತ್ತು 338 ಏತ ನೀರಾವರಿ ಯೋಜನೆಗಳು ಸೇರಿ ಒಟ್ಟು 519 ಮೇಲ್ಮೈ ಜಲ ಯೋಜನೆಗಳಾಗಿದ್ದು, ಗಣತಿಯಲ್ಲಿ ಒಟ್ಟು 18,809 ಯೋಜನೆಗಳು ಇರುವುದು ಕಂಡುಬಂದಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಅಂತರ್ಜಲ ಯೋಜನೆಗಳು ಹೆಚ್ಚಾಗಿರಬಹುದು. ಜಿಲ್ಲೆಯ ಪ್ರತಿಯೊಂದು ಸಣ್ಣ ನೀರಾ ವರಿ ಹಾಗೂ ನೀರಿನಾಸರೆಗಳ ಗಣತಿಯ ದತ್ತಾಂಶಗಳನ್ನು ಯಾವುದೇ ಲೋಪವಿಲ್ಲದಂತೆ ಕ್ರೋಢೀಕರಿಸ ಬೇಕು ಎಂದು ಅವರು ಗಣತಿದಾರರಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ ಎಸ್, ಮಂಗಳೂರು ಸಣ್ಣ ನೀರಾವರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಲ್ವಿನ್ ಅಗೇರ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಇತರರು ಉಪಸ್ಥಿತರಿದ್ದರು.

‘6ನೇ ಸಣ್ಣ ನೀರಾವರಿ ಗಣತಿ ದತ್ತಾಂಶದ ಅನ್ವಯ ಜಿಲ್ಲೆಯಲ್ಲಿ ಒಟ್ಟು 257 ಗ್ರಾಮಗಳಲ್ಲಿ 18,290 ಅಂತರ್ಜಲ ಯೋಜನೆಗಳು, 181 ಮೇಲ್ಮೈ ಜಲಹರಿಯುವ ಯೋಜನೆಗಳು ಮತ್ತು 338 ಏತ ನೀರಾವರಿ ಯೋಜನೆಗಳು ಸೇರಿ ಒಟ್ಟು 519 ಮೇಲ್ಮೈ ಜಲ ಯೋಜನೆಗಳಿದ್ದು, ಗಣತಿಯಲ್ಲಿ ಒಟ್ಟು 18,809 ಯೋಜನೆಗಳು ಇರುವುದು ಕಂಡುಬಂದಿದೆ.’

ಡಾ.ಕೆ.ವಿದ್ಯಾಕುಮಾರಿ, ಉಡುಪಿ ಜಿಲ್ಲಾಧಿಕಾರಿ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X