ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜೂ.10:ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ವಿವಿಧ ಯೋಜನೆಗಳಾದ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸ ಬಯಸುವ ಹಿಂದುಳಿದ ವರ್ಗಗಳ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ - http://sevasindhu.karnataka.gov.in- ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ - https://www.kaushalkar.com-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ - www.dbcdc.karnataka.gov.in, ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸ ಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.