ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ಮಾಜಿ ಸೈನಿಕರ ನೊಂದಣಿ
ಉಡುಪಿ, ಜೂ.11: ನಾಗರಿಕ ರಕ್ಷಣಾ ವ್ಯವಸ್ಥೆಯು ಸ್ವಯಂಸೇವಾ ಮಾದರಿಯಾಗಿದ್ದು, ಯುದ್ಧ ಹಾಗೂ ಶಾಂತಿಯ ಸಂದರ್ಭದಲ್ಲಿ ಇದರ ಜವಾಬ್ದಾರಿಯನ್ನು ನಿರ್ದಿಷ್ಟಪಡಿಸಲಾಗಿದೆ. ಜಿಲ್ಲೆಯಲ್ಲಿರುವ ಮಾಜಿ ಸೈನಿಕರು ಸ್ವಯಂಪ್ರೇರಿತವಾಗಿ, ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಇಚ್ಛಿಸಿದ್ದಲ್ಲಿ ವೆಬ್‌ಸೈಟ್ -& www.civildefencewarriors.gov.in-ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಮಾಜಿ ಸೈನಿಕರು ನೋಂದಾವಣಿಯ ಮಾಹಿತಿಯನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರ ಇ-ಮೇಲ್ -dydirdswrmlore@gmail.com ಅಥವಾ ದೂರವಾಣಿ 0824-2450933ಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
Next Story





