ಕಿದಿಯೂರು: ಸ್ವಾಸ್ತಯ ಸಂಕಲ್ಪ ಕಾರ್ಯಕ್ರಮ

ಉಡುಪಿ, ಜೂ.14: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ತಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ಅಧ್ಯಕ್ಷತೆ ವಹಿಸಿ ದ್ದರು. ಮಲ್ಪೆಆರಕ್ಷಕ ಠಾಣೆಯ ಠಾಣಾಧಿಕಾರಿ ಗಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿ ಗಳಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಹಾಗೂ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ.ಕಲ್ಮಾಡಿ ಉಪಸ್ಥಿತರಿ ದ್ದರು. ಸೇವಾ ಪ್ರತಿನಿಧಿ ಜಯಶೀ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಲೂಕು ಕೃಷಿ ಅಧಿಕಾರಿ ಮಂಜುನಾಥ್ ಸ್ವಾಗತಿಸಿದರು. ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಲಲಿತಾ ವಂದಿಸಿದರು.





