ನವಜೀವನ ಲೇ ಕೌನ್ಸಿಲರ್‌ನ ತರಬೇತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಮತ್ತು ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್‌ನ 6ನೇ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ರವಿವಾರ ನೆರವೇರಿಸಿದರು.
ಅಧ್ಯಕ್ಷತೆಯನ್ನು ಉಡುಪಿ ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ ವಹಿಸಿದ್ದರು. ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಪ್ರೊಫೆಸರ್ ಕೆ.ಎಸ್.ಅಡಿಗ ಮತ್ತು ನಿವೃತ್ತ ಬ್ಯಾಂಕ್ ಅಧಿಕಾರಿ ರಾಘವೇಂದ್ರ ರಾವ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ಮನಶಾಸ್ತ್ರಜ್ಞ ನಾಗರಾಜ್ ಮೂರ್ತಿ ಉಪಸ್ಥಿತರಿದ್ದರು.
ನವಜೀವನ ಲೇ ಕೌನ್ಸಿಲರ್‌ನ ತರಬೇತಿ ಕಾರ್ಯಾಗಾರದ ಕೋರ್ಡಿನೇಟರ್ ಮತ್ತು ಆಸ್ಪತ್ರೆಯ ಆಡಳಿತ ಅಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಆಪ್ತ ಸಮಾಲೋಚಕಿ ಪದ್ಮ ರಾಘವೇಂದ್ರ ಪ್ರಾರ್ಥಿಸಿದರು. ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಾನಸಿಕ ಕಾಯಿಲೆಗಳ ಕುರಿತಾದ 12 ವಾರಗಳ ತರಬೇತಿಯ ಪ್ರಯೋಜನವನ್ನು 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಡೆದುಕೊಳ್ಳಲಿದ್ದಾರೆ.





