Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯರ ಬದುಕು ನಮಗೆ ಆದರ್ಶ: ಎಳ್ಳಾರೆ...

ಹಿರಿಯರ ಬದುಕು ನಮಗೆ ಆದರ್ಶ: ಎಳ್ಳಾರೆ ಸದಾಶಿವ ಪ್ರಭು

ವಾರ್ತಾಭಾರತಿವಾರ್ತಾಭಾರತಿ15 Jun 2025 7:44 PM IST
share
ಹಿರಿಯರ ಬದುಕು ನಮಗೆ ಆದರ್ಶ: ಎಳ್ಳಾರೆ ಸದಾಶಿವ ಪ್ರಭು

ಶಿರ್ವ, ಜೂ.15: ನಮ್ಮ ಹಿರಿಯರು ಪ್ರಕೃತಿಯ ಜೊತೆಗೆ ಬೆಳೆದವರು. ಅಂದಿನ ಹಿರಿಯರ ಕಷ್ಟದ ಶ್ರಮ ಜೀವನ, ಸತ್ಯ, ನಿಷ್ಠೆ ಪ್ರಾಮಾಣಿಕತೆ ಇಂದು ಮರೆಯಾಗುತ್ತಿದೆ. ಅವರ ಬದುಕು ನಮಗೆ ಆದರ್ಶವಾಗಿರ ಬೇಕು. ಹಿರಿಯರ ಕೃಷಿ ಸಂಸ್ಕೃತಿ, ಪ್ರಕೃತಿಯ ನಂಟು ನವಪೀಳಿಗೆಗೆ ಪರಿಚಯಿಸುವ ಕಾರ್ಯ ಅಗತ್ಯ ವಾಗಿ ಮಾಡಬೇಕು ಎಂದು ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಬೆಂಗಳೂರು ಇದರ ನಿರ್ದೇಶಕ ಎಳ್ಳಾರೆ ಸದಾಶಿವ ಪ್ರಭು ಹೇಳಿದ್ದಾರೆ.

ಬಂಟಕಲ್ಲು ರಾಜಾಪುರ ಸಾರಸ್ವತ ಸೇವಾ ವೃಂದದ ಆಶ್ರಯದಲ್ಲಿ ಹಾಗೂ ಶ್ರೀದುರ್ಗಾ ಮಹಿಳಾ ವೃಂದದ ಸಹಭಾಗಿತ್ವದಲ್ಲಿ ಸಡಂಬೈಲು ಅನಂತರಾಮ ವಾಗ್ಲೆಯವರ ದೊಡ್ಡಗದ್ದೆಯಲ್ಲಿ ಸಮಾಜ ಬಾಂಧವರಿಗಾಗಿ ರವಿವಾರ ಏರ್ಪಡಿಸಲಾದ 8ನೇ ವರ್ಷದ ಗಾದಂತ್ ಕ್ಹೇಳ್ ಮೇಳ್ -ಕೆಸರು ಗದ್ದೆ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿ ಸಾರಸ್ವತ ಸೌಹಾರ್ದ ಸಹಕಾರಿ ಸಂಘ ಮಣಿಪಾಲ ಅಧ್ಯಕ್ಷ ವಾಸುದೇವ ಕೃಷ್ಣ ನಾಯಕ್ ಸ್ಪರ್ಧಾ ವಿಜೇಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾ ಪರಮೇಶ್ವರೀ ದೇವಳದ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಗಂಪದಬೈಲು, ಸ್ಥಳೀಯ ಉದ್ಯಮಿ ರಾಮಚಂದ್ರ ನಾಯಕ್ ಪಡುಬೆಳ್ಳೆ, ಗದ್ದೆಯ ಯಜಮಾನ ಅನಂತರಾಮ ವಾಗ್ಲೆ, ಆರ್‌ಎಸ್‌ಬಿ ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್, ಶ್ರೀದುರ್ಗಾ ಮಹಿಳಾ ಮಹಿಳಾ ವೃಂದದ ಅಧ್ಯಕ್ಷೆ ಸುನೀತಾ ದೇವೇಂದ್ರ ನಾಯಕ್, ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ಸೇವಾ ವೃಂದದ ಕಾರ್ಯದರ್ಶಿ ವಿಶ್ವನಾಥ ಬಾಂದೇಲ್ಕರ್ ಗದ್ದೆಗೆ ಹಾಲು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿಶೇಷ ಆಕರ್ಷಣೆಯಾಗಿ ಕೆಸರುಗದ್ದೆಯಲ್ಲಿ ಮೂಡುಬೆಳ್ಳೆ ಜಡ್ಡು ಉಮೇಶ್ ನಾಯಕ್‌ರವರ ಕಂಬಳದ ಕೋಣಗಳ ಓಟವನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಕೋಣಗಳ ಯಜಮಾನ ಮೂಡುಬೆಳ್ಳೆ ಜಡ್ಡು ಉಮೇಶ್ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಕೆಸರು ಗದ್ದೆಯಲ್ಲಿ ನಿಧಿ ಶೋಧ, ಮಕ್ಕಳಿಗೆ ಕೆಸರುಗದ್ದೆ ಓಟ, ಅಡಿಕೆ ಹಾಳೆ ಓಟ, ಚೆಂಡು ಹೆಕ್ಕು ವುದು, ಹಲಸಿನ ಬೀಜ ಹೆಕ್ಕುವುದು, ಪ್ರೌಢರಿಗೆ ತಂಡಗಳಲ್ಲಿ ಕಂಬಳ ಓಟ, ರಿಲೇ, ಗೂಟಕ್ಕೆ ಸುತುತಿಹಾಕಿ ಓಟ, ಬಲೂನ್ ಓಟ, ಹಿರಿಯರಿಗೆ ದಂಪತಿ ಉಪ್ಪುಮೂಟೆ ಓಟ, ಕಂಬಳ ಓಟ, ರಿಲೇ ಓಟ, ಮಡಲು ಹೆಣೆಯುವುದು, ಬೈಹುಲ್ಲಿನಿಂದ ಹಗ್ಗ ತಯಾರಿ, ಬಲೂನ್ ಓಟ, ಹಗ್ಗ ಜಗ್ಗಾಟ, ಮಡಕೆ ಒಡೆಯುವ ಸ್ಪರ್ಧೆಗಳು ನಡೆದವು.

ಪ್ರಧಾನ ಸಂಘಟಕ ಸೇವಾ ವೃಂದದ ಅಧ್ಯಕ್ಷ ಕೆ.ಆರ್ ಪಾಟ್ಕರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ವಿಶ್ವನಾಥ್ ಬಾಂದೇಲ್ಕರ್ ಸ್ಫರ್ಧಾ ವಿಜೇತರನ್ನು ಪರಿಚಯಿಸಿದರು. ದೇವದಾಸ್ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X