ಉಡುಪಿ| ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ಉಡುಪಿ: ಉಡುಪಿ ನಗರದ ಬೈಲಕೆರೆಯಲ್ಲಿರುವ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಇಂದು ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಶಾಲೆಯಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಇ-ಮೇಲ್ ಸ್ವೀಕೃತವಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸರು ಇಡಿ ಶಾಲೆಯನ್ನು ಸುಪರ್ದಿಗೆ ಪಡೆದು ವಿಧ್ವಂಸಕ ವಿರೋಧಿ ತಂಡ, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಯಿತು.
ಆದರೆ ಈ ವೇಳೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಕಂಡು ಬಂದಿಲ್ಲ. ಆದುದರಿಂದ ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದುದರಿಂದ ಇದೀಗ ಶಾಲೆಯನ್ನು ಪರಿಶೀಲಿಸಿ, ಪೊಲೀಸರು ಆಡಳಿತ ಮಂಡಳಿಗೆ ಬಿಟ್ಟುಕೊಟ್ಟಿದ್ದಾರೆಂದು ತಿಳಿದು ಬಂದಿದೆ.
Next Story





