Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ನನ್ನಿಂದ ಅಧಿಕಾರ ಕಸಿದುಕೊಳ್ಳಲಾಗಿದೆ’:...

‘ನನ್ನಿಂದ ಅಧಿಕಾರ ಕಸಿದುಕೊಳ್ಳಲಾಗಿದೆ’: ನಿರ್ಗಮನ ಅಧ್ಯಕ್ಷ ಕಿಶೋರ್ ಕುಮಾರ್ ಆಕ್ರೋಶ

► ಅವಧಿಗೆ ಮುನ್ನ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರ ಬದಲಾವಣೆ ► ಅಧಿಕಾರ ಹಸ್ತಾಂತರ ಕಾರ್ಯಕ್ರಮ ವೇದಿಕೆಯಲ್ಲಿ ಅಸಮಾಧಾನ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ16 Jun 2025 6:07 PM IST
share
‘ನನ್ನಿಂದ ಅಧಿಕಾರ ಕಸಿದುಕೊಳ್ಳಲಾಗಿದೆ’: ನಿರ್ಗಮನ ಅಧ್ಯಕ್ಷ ಕಿಶೋರ್ ಕುಮಾರ್ ಆಕ್ರೋಶ

ಉಡುಪಿ, ಜೂ.16: ಅವಧಿಗೆ ಮುನ್ನ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ನಿಗರ್ಮನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸಲು ಹಾಗೂ ನಿಗರ್ಮನ ಅಧ್ಯಕ್ಷರ ಸನ್ಮಾನವನ್ನು ಸ್ವೀಕರಿಸಲು ನಿರಾಕರಿಸಿದ ಕಿಶೋರ್ ಕುಮಾರ್, ತನಗೆ ಆದ ನೋವು ಮತ್ತು ಮೋಸವನ್ನು ಬಹಿರಂಗವಾಗಿ ಹೇಳಿಕೊಂಡರು. ಬಿಜೆಪಿ ಜಿಲ್ಲಾಧ್ಯಕ್ಷರ ಅವಧಿ ಮೂರು ವರ್ಷವಾದರೂ ಕಿಶೋರ್ ಕುಮಾರ್ ಅವರನ್ನು ಒಂದು ವರ್ಷ ನಾಲ್ಕು ತಿಂಗಳಿಗೆ ಬದಲಾಯಿಸಿರುವುದೇ ಈ ಅಸಮಾಧಾನಕ್ಕೆ ಕಾರಣವಾಗಿದೆ.

ಎಂಟು ತಿಂಗಳಲ್ಲೇ ವದಂತಿ: ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವಾಗ ಜಾತಿ, ಹಣಗಳ ಬಗ್ಗೆ ಚರ್ಚೆ ಆಗುತ್ತದೆ. ಆದರೆ ಒಬ್ಬ ಜಿಲ್ಲಾಧ್ಯಕ್ಷನ ನೇಮಕ ಮಾಡುವಾಗ ಇದೆಲ್ಲ ಬೇಕೇ? ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬುದಾಗಿ ಕೇವಲ ಭಾಷಣದಲ್ಲಿ ಮಾತ್ರ. ನಾನು ಜಿಲ್ಲಾಧ್ಯಕ್ಷನಾಗಿದ್ದಾಗ ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿತ್ತು. ಪಕ್ಷ ಕೊಟ್ಟ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ರಾಜ್ಯಕ್ಕೆ ಯಾವುದೇ ಸುಳ್ಳು ವರದಿ ಕಳುಹಿಸದೆ ಮಾಡಿದ್ದೆ. ಆದರೂ ನನ್ನಿಂದ ಏನು ತೊಂದರೆ ಆಗಿತ್ತು ಎಂಬುದು ಗೊತ್ತಿಲ್ಲ ಎಂದರು.

‘ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಆಯ್ಕೆ ಆಗುತ್ತೇನೆ ಎಂಬುದು ನನಗೆ ಗೊತ್ತಿರಲಿಲ್ಲ. ಬೇರೆಯವರು ಅದಕ್ಕೆ ಪ್ರಯತ್ನ ಪಟ್ಟಿದ್ದರು. ಆದರೆ ನಾನು ಯಾವುದೇ ಪ್ರಯತ್ನ ಪಟ್ಟಿರಲಿಲ್ಲ. ಒಂದು ವರ್ಷ ನಾಲ್ಕು ತಿಂಗಳು ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದೆ. ಆದರೆ ಅಧ್ಯಕ್ಷನಾಗಿ ಎಂಟು ತಿಂಗಳು ಆಗುವಾಗಲೇ ನನ್ನ ಅಧ್ಯಕ್ಷ ಸ್ಥಾನ ಹೋಗುವ ಬಗ್ಗೆ ವದಂತಿಗಳು ಹರಡಲು ಆರಂಭಿಸಿತು. ಈ ವಿಚಾರ ತಿಳಿದ ಕೂಡಲೇ ಜಿಲ್ಲಾ ಪದಾಧಿಕಾರಿಗಳ ಸಭೆ ಕರೆದು ನಾನು ಯಾವತ್ತು ಈ ಸ್ಥಾನ ಉಳಿಸಿ ಅಂತ ಯಾರ ಬಳಿಯೂ ಬೇಡಿಕೊಳ್ಳುವುದಿಲ್ಲ. ನಿಮಗೆ ನಾನು ಈ ಸ್ಥಾನದಲ್ಲಿ ಮುಂದುವರೆಯಬೇಕೆಂದು ಅನಿಸಿದರೆ ನೀವು ಪ್ರಯತ್ನ ಮಾಡುವುದಾದರೆ ನನ್ನ ಆಕ್ಷೇಪ ಇಲ್ಲ ಎಂದು ಹೇಳಿದೆ’

ಮೋಸ ಯಾಕೆ ಮಾಡಬೇಕು: ಸಂಜೆ 7.30ಕ್ಕೆ ನನಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಿಂದ ಕರೆ ಬಂದಿತ್ತು. ನಿಮ್ಮನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಬದಲು ಮಾಡುವುದಾಗಿ ಹೇಳಿದರು. ಆ ಸ್ಥಾನಕ್ಕೆ ಶಾಸಕರನ್ನು ನೇಮಕ ಮಾಡುವುದಿಲ್ಲ ಎಂದರು. ಅದಕ್ಕೆ ನಾನು ನನ್ನನ್ನು ತೆಗೆದ ನಂತರ ನೀವು ಯಾರನ್ನು ಮಾಡಿದರೂ ನನಗೆ ಅದರ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಯಾವಾಗ ಅಧ್ಯಕ್ಷರ ಮಾಡುತ್ತೀರಿ ಎಂದು ಕೇಳಿದಕ್ಕೆ ರಾತ್ರಿ ಮಾಡುತ್ತೇವೆ ಎಂದು ಹೇಳಿದರು. ಆದರೆ ಫೋನ್ ಇಟ್ಟು ವಾಟ್ಸಾಪ್ ನೋಡುವಾಗ ಅಧ್ಯಕ್ಷರ ಬದಲಾವಣೆ ಮಾಡಿರುವ ಆದೇಶ ಬಂದಿದೆ. ಈ ರೀತಿ ಮೋಸ ಯಾಕೆ ಮಾಡಬೇಕು ಎಂದು ಕಿಶೋರ್ ಕುಮಾರ್ ಪ್ರಶ್ನಿಸಿದರು.

ಎಲ್ಲರು ಕರೆ ಮಾಡಿ ನಿಮ್ಮನ್ನು ಅಧ್ಯಕ್ಷ ಸ್ಥಾನದಿಂದ ತೆಗೆದರಲ್ಲ ಎಂದು ಹೇಳುವಾಗ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅವಧಿಗೆ ಮುನ್ನ ಬದಲಾವಣೆ ಮಾಡಿರುವುದರಿಂದ ನನ್ನ ಬಗ್ಗೆ ಕೆಲವು ತಪ್ಪು ಸಂದೇಶಗಳು ಹೋಗುತ್ತಿವೆ. ನಾನು ಯಾರಿಗೂ ವಂಚನೆ ಮಾಡಿಲ್ಲ, ಯಾರಿಂದಲೂ ಹಣ ಪಡೆದಿಲ್ಲ. ನಾನು ಅಧ್ಯಕ್ಷನಾದ ಬಳಿಕ ಸಾಕಷ್ಟು ಖರ್ಚುಗಳಾಗಿವೆ. ಕೈಯಿಂದ ತುಂಬಾ ಹಣ ವ್ಯಯ ಮಾಡಿದ್ದೇನೆ. ಯಾರ ಬಳಿಯೂ ಬೇಡಲು ಹೋಗಿಲ್ಲ. ಇದಕ್ಕಿಂತ ಗರಿಷ್ಠ ನಿಷ್ಠೆ ಹಾಗೂ ಪ್ರಾಮಾಣಿಕತೆ ತೋರಿಸಲು ನನ್ನಿಂದ ಆಗುವುದಿಲ್ಲ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ವಿಕಾಸ್ ಪುತ್ತೂರು, ರೇಷ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

ಅಧಿಕಾರ ಹಸ್ತಾಂತರ, ಸನ್ಮಾನ ಸ್ವೀಕರಿಸಲು ನಿರಾಕರಣೆ!

‘ನಿರ್ಗಮನ ಅಧ್ಯಕ್ಷರಿಗೆ ಅಭಿನಂದನೆ ಮಾಡುವುದು ಬೇಡ. ನಾನು ಅದನ್ನು ಸ್ವೀಕರಿಸುವುದಿಲ್ಲ. ಅಧಿಕಾರ ಹಸ್ತಾಂತರ ಕೂಡ ಇಲ್ಲ. ಅಧಿಕಾರವನ್ನು ನನ್ನಿಂದ ಕಸಿದುಕೊಳ್ಳಲಾಗಿದೆ. ಆದುದರಿಂದ ಇದು ಅಧಿಕಾರ ಹಸ್ತಾಂತರ ಕಾರ್ಯಕ್ರಮ ಅಲ್ಲ. ನನ್ನ ಹತ್ತಿರ ಇಲ್ಲದ ಅಧಿಕಾರವನ್ನು ಹಸ್ತಾಂತರ ಮಾಡಿದರೆ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ಅಧಿಕಾರವನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಳು ಹಸ್ತಾಂತರ ಮಾಡುತ್ತಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮದಲ್ಲಿ ತಿಳಿಸಿದರು.

ಅದರಂತೆ ನೂತನ ಜಿಲ್ಲಾಧ್ಯಕ್ಷರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಆ ವೇಳೆ ಇದ್ದ ನಿರ್ಗಮನ ಅಧ್ಯಕ್ಷ ತಮ್ಮ ಕೈಯನ್ನು ಹಿಂದಕ್ಕೆ ಕಟ್ಟಿ ನಿಂತಿದ್ದರು. ಇದೇ ವೇಳೆ ಬಿಜೆಪಿ ಮುಖಂಡ ಉದಯ ಕುಮಾರ್ ಶೆಟ್ಟಿ, ನಿರ್ಗಮನ ಅಧ್ಯಕ್ಷರಿಗೆ ಶಾಲು ಹಾಕಿ ಅಭಿನಂದಿಸಲು ಮುಂದಾದರು. ಆಗ ಕಿಶೋರ್ ಕುಮಾರ್ ಅದನ್ನು ನಿರಾಕರಿಸಿದರು. ಕಾರ್ಯಕ್ರಮ ಮುಗಿದ ಕೂಡಲೇ ಕಿಶೋರ್ ಕುಮಾರ್ ಮುಂದಿನ ಕಾರ್ಯಕ್ರಮಕ್ಕೆ ನಿಲ್ಲದೆ ತನ್ನ ಹೆಗಲ ಮೇಲೆ ಇದ್ದ ಬಿಜೆಪಿ ಶಾಲನ್ನು ಅಲ್ಲೇ ಇಟ್ಟು ಹೊರ ನಡೆದರು.

‘ಇತ್ತೀಚೆಗೆ ಶಿಕಾರಿಪುರಕ್ಕೆ ಹೋಗಿದೆ. ಅಲ್ಲಿ ರಾಜ್ಯಾಧ್ಯಕ್ಷರು ಸಿಕ್ಕಿ ತುಂಬಾ ಒಳ್ಳೆಯ ರೀತಿಯಲ್ಲಿ ಮಾತನಾಡಿದರು. ಕೊನೆಗೆ ಗೊತ್ತಾಯಿತು ಅಧ್ಯಕ್ಷರು ಒಳ್ಳೆಯ ರೀತಿಯಲ್ಲಿ ಮಾತನಾಡಿರುವುದು ಇದಕ್ಕೆ ಎಂಬುದು. ನನ್ನ ಒಂದು ಕಾಲು ವರ್ಷದ ಅವಧಿಯಲ್ಲಿ ನಾನು ಜಿಲ್ಲಾಧ್ಯಕ್ಷ ಎಂಬುದಾಗಿ ಗಟ್ಟಿಯಾಗಿ ಎದೆ ಉಬ್ಬಿಸಿ ಹೇಳಿರುವುದು ಕೇವಲ ಎಂಟು ತಿಂಗಳು. ಉಳಿದದ್ದು ವದಂತಿಯಿಂದ ನನ್ನ ಕಾಲಾಹಣ ಮಾಡುವಂತಾಯಿತು. ರಾಜಕಾರಣ ಬಿಟ್ಟು ದೊಡ್ಡ ಪ್ರಪಂಚ ನನ್ನ ಮುಂದೆ ಇದೆ. ಅಲ್ಲಿ ಹೇಗೆ ಇರಬೇಕು ಎಂಬುದು ನನಗೆ ಗೊತ್ತು’

-ಕಿಶೋರ್ ಕುಮಾರ್, ನಿರ್ಗಮನ ಬಿಜೆಪಿ ಜಿಲ್ಲಾಧ್ಯಕ್ಷರು

‘ಅಧಿಕಾರ ಹಸ್ತಾಂತರ ಮಾಡುವಾಗ ಸಣ್ಣ ಪ್ರಮಾಣದಲ್ಲಿ ಬೇಸರ ಆಗುವುದು ಸಾಮಾನ್ಯ. ಪಕ್ಷದ ವ್ಯವಸ್ಥೆಗೆ ತೊಂದರೆ ಆಗುವ ರೀತಿಯಲ್ಲಿ ಬೇಸರ ಏನು ಇಲ್ಲ. ಕಾಲಕಾಲಕ್ಕೆ ಬದಲಾವಣೆ ಆಗಲೇಬೇಕು. ಬೇಸರ ಆಗಿದ್ದರೆ ಅದನ್ನು ಸರಿಪಡಿಸುವ ಕಾರ್ಯ ಮಾಡಲಾಗುವುದು’

-ಸುನೀಲ್ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ




share
ವಾರ್ತಾಭಾರತಿ
ವಾರ್ತಾಭಾರತಿ
Next Story
X