ಕಾರ್ಕಳ: ಗದ್ದೆಯಲ್ಲಿ ಕುಸಿದು ಬಿದ್ದು ಕೃಷಿಕ ಮೃತ್ಯು

ಕಾರ್ಕಳ, ಜೂ.17: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ಸಂಜೆ 7ಗಂಟೆ ಸುಮಾರಿಗೆ ಕುಕ್ಕುಂದೂರು ಗ್ರಾಮದ ಬೈಲಬರಿ ಎಂಬಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಸಂತೋಷ್ ವಿನ್ಸೆಂಟ್ ಫೆರ್ನಾಂಡೀಸ್ ಎಂದು ಗುರುತಿಸ ಲಾಗಿದೆ. ಇವರು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





