ಉಡುಪಿ ಜಿಲ್ಲೆಯ ವಿವಿಧೆಡೆ ಯೋಗ ದಿನಾಚರಣೆ

ಉಡುಪಿ, ಜೂ.21: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿ ನಗರ ಮಂಡಲದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ಸಭಾಂಗಣದಲ್ಲಿ ನಡೆಯಿತು.ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಸಕರಾದ ಯಶ್ಪಾಲ್ ಎ.ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮುಖಂಡರಾದ ಉದಯಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ದಿನೇಶ್ ಅಮೀನ್, ಪ್ರಭಾಕರ ಪೂಜಾರಿ, ಶ್ರೀಶ ನಾಯಕ್, ರೇಷ್ಮಾ ಉದಯ ಶೆಟ್ಟಿ, ದಿನೇಶ್ ನಾಯಕ್, ಗಿರೀಶ್ ಅಮೀನ್, ಸತ್ಯಾನಂದ ನಾಯಕ್, ದಿನಕರ ಬಾಬು, ಶಿಲ್ಪಾ ಜಿ.ಸುವರ್ಣ, ಶಿವಕುಮಾರ್ ಅಂಬಲ ಪಾಡಿ, ಶ್ರೀಕಾಂತ್ ನಾಯಕ್, ಜಗದೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜು:
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಉಡುಪಿ ಎಂಜಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ’ಮುಂಜಾನೆ ಯೋಗ ಕಾರ್ಯಕ್ರಮ’ ನಡೆಸಲಾಯಿತು.
ಮಣಿಪಾಲ ಮಾಹೆ ಪ್ರಾಧ್ಯಾಪಕಿ ಡಾ.ಪೂರ್ಣಿಮಾ ಶೆಟ್ಟಿ ಯೋಗಾಸನಗಳನ್ನು ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತ ಮಯ್ಯ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸುಚಿತ್ ಕೋಟ್ಯಾನ್, ರೇಖಾ ಎನ್.ಚಂದ್ರ, ಉಪನ್ಯಾಸಕ ವಿದ್ಯಾನಾಥ್ ಕೆ. ಉಪಸ್ಥಿತರಿದ್ದರು.
ಮೂಡ್ಲಕಟ್ಟೆ ಕಾಲೇಜು:
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಅಫ್ ಪ್ಯಾರಾಮೆಡಿಕಲ್ ಸೈನ್ಸಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಆಯುಷ್ಮಾನ್ ಅರೋಗ್ಯ ಕೇಂದ್ರದ ಯೋಗ ಗುರು ಶೋಭಾ ಶೆಟ್ಟಿ ಹಾಗೂ ಚೆನ್ನಮ್ಮ ಉಡುಪ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಝಸ್, ಐಎಂಜೆ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗ್ಡೆ, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಇನ್ಸ್ಟಿಟ್ಯೂಟ್ನ ಡೀನ್ ಡಾ.ಪದ್ಮ ಚರಣ ಸ್ವೈನ್, ಉಪಪ್ರಾಂಶುಪಾಲೆ ಸೌಜನ್ಯ ಮುಖ್ಯ ಅತಿಥಿಗಳಾಗಿದ್ದರು.
ಕಾಪು ಮಹಿಳಾ ಮೋರ್ಚಾ:
ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಪು ಮಂಡಲ ಬಿಜೆಪಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾ ಗುರುರಾಜ್, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ, ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೋಪಾಲಕೃಷ್ಣ ರಾವ್, ಸಂಧ್ಯಾ ಕಾಮತ್, ಯೋಗ ಗುರು ಸೀತಾರಾಯ್ ಮೊದಲಾದವರು ಉಪಸ್ಥಿತರಿದ್ದರು.
ಎ.ವಿ.ಬಾಳಿಗಾ ಆಸ್ಪತ್ರೆ:
ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಆಯುರ್ವೇದ ಮತ್ತು ಯೋಗ ಚಿಕಿತ್ಸಾ ವಿಭಾಗದ ಆಶ್ರಯದಲ್ಲಿ ಯೋಗ ದಿನಾಚರಣೆಯನ್ನು ಆಸ್ಪತ್ರೆಯ ಕಮಲ್ ಎ.ಬಾಳಿಗ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಯೋಗಪಟು ಡಾ.ಚರಿಷ್ಮಾ ಶೆಟ್ಟಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು.
ವೇದಿಕೆಯಲ್ಲಿ ಮನೋವೈದ್ಯರಾದ ಡಾ.ವಿರುಪಾಕ್ಷ ದೇವರಮನೆ, ಡಾ.ದೀಪಕ್ ಮಲ್ಯ, ಡಾ.ಮಾನಸ್ ಈ.ಆರ್., ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ರೀಕರ್ ಮಲ್ಯ, ಆಯುರ್ವೇದ ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಜಿ. ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ಯೋಗ ಚಿಕಿತ್ಸಕಿ ಇಲ ಶೆಟ್ಟಿ ಉಪಸ್ಥಿತರಿದ್ದರು. ಅಮೃತ್ ಕುಮಾರ್ ಸ್ವಾಗತಿಸಿ, ನಾಗವೇಣಿ ವಂದಿಸಿ, ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು.
ಶಿರ್ವ ವಿವಿಧೆಡೆ:
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಿರ್ವ ಪರಿಸರದ ಸಾಮಾಜಿಕ ಸೇವಾ ಸಂಘಟನೆಗಳು ಶಾಲಾ ಕಾಲೇಜು, ಮಠ ಮಂದಿರಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.ಶಿರ್ವ ಪತಂಜಲಿ ಯೋಗ ಸಮಿತಿಯ ವತಿಯಿಂದ ಅನಂತ್ರಾಯ ಶೆಣೈಯವರ ಸಂಚಾಲಕತ್ವದಲ್ಲಿ ಶಿರ್ವ, ಬಂಟಕಲ್ಲು, ಮಟ್ಟಾರು, ಜತ್ರಬೆಟ್ಟು, ಮಲ್ಲಾರು ಸೇರಿದಂತೆ 14 ಕೇಂದ್ರಗಳಲ್ಲಿ ಹಾಗೂ 10 ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಶಿರ್ವ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ಸಮೀಪದ ಶಿರ್ವ ಮಹಿಳಾ ಸೌಧದಲ್ಲಿ ಮಹಿಳಾ ಮಂಡಲದ ಸಹಭಾಗಿತ್ವದಲ್ಲಿ, ಶ್ರೀೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನ, ಶಿರ್ವ ಹಿಂದೂ ಪ್ರೌಢ ಶಾಲೆಯಲ್ಲಿ, ಪಡುಬೆಳ್ಳೆ ಶ್ರೀನಾರಾಯಣಗುರು ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಯೋಗ ದಿನವನ್ನು ಆಚರಿಸಲಾಯಿತು.







