ಕೆಇಎ ಸಿಇಟಿ ಪ್ರವೇಶ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ.23: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವತಿಯಿಂದ ಸಿಇಟಿ ಮೂಲಕ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಕೆಇಎ ಸಿಇಟಿ ಪ್ರವೇಶ ಮಾಹಿತಿ ಕಾರ್ಯಕ್ರಮವನ್ನು ರವಿವಾರ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ. ತಿರುಮಲೇಶ್ವರ ಭಟ್ ಸಿಇಟಿ ಪ್ರವೇಶ ಪ್ರಕ್ರಿಯೆಯ ವಿವಿಧ ಹಂತಗಳು, ಆಯ್ಕೆ ನಮೂದಿಸುವ ಕ್ರಮ, ಅಣಕು ಸೀಟು ಹಂಚಿಕೆ, ವಿವಿಧ ಸುತ್ತುಗಳಲ್ಲಿ ನೀಡಬಹುದಾದ ಆಯ್ಕೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರು. ಜೊತೆಗೆ ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟು ಹಂಚಿಕೆ ವಿಧಾನದಲ್ಲಿ ಆಗಿರುವ ಪ್ರಮುಖ ಬದಲಾವಣೆಗಳ ಕುರಿತು ವಿವರವಾಗಿ ತಿಳಿಸಿದರು.
ಅಧ್ಯಕ್ಷತೆಯನ್ನು ಸೋದೆ ವಾದಿರಾಜಮಠ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಧಿಕಾರಿ ಪ್ರೊ.ಡಾ.ರಾಧಾಕೃಷ್ಣ ಎಸ್.ಐತಾಳ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 125ಕ್ಕೂ ಹೆಚ್ಚು ಸಿಇಟಿ ಆಸಕ್ತ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.
Next Story





