Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ:...

ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಆರೋಪಿ ಇಂಜಿನಿಯರ್ ಯುವತಿ ಸೆರೆ

ಹೆಚ್ಚಿನ ತನಿಖೆಗಾಗಿ ಉಡುಪಿ ಪೊಲೀಸರ ಕಸ್ಟಡಿಗೆ: ಎಸ್ಪಿ

ವಾರ್ತಾಭಾರತಿವಾರ್ತಾಭಾರತಿ23 Jun 2025 8:41 PM IST
share
ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಆರೋಪಿ ಇಂಜಿನಿಯರ್ ಯುವತಿ ಸೆರೆ

ಉಡುಪಿ, ಜೂ.23: ಶಾಲೆ, ಆಸ್ಪತ್ರೆ ಮತ್ತು ಕ್ರೀಡಾಂಗಣಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಹಮದಾಬಾದ್ ಪೊಲೀಸರು ಚೈನ್ನೆ ಮೂಲದ ಆರೋಪಿ ಇಂಜಿನಿಯರ್ ಯುವತಿಯನ್ನು ಬಂಧಿಸಿದ್ದು, ಇದೇ ರೀತಿಯ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಉಡುಪಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯಲು ಮುಂದಾಗಿದ್ದಾರೆ.

ಜೂ.16ರಂದು ಉಡುಪಿ ಬೈಲಕೆರೆಯಲ್ಲಿರುವ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇದರಲ್ಲಿ ‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಪೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ ಮತ್ತು ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ ಎಂದು ಬರೆಯಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಇಮೇಲ್ ಸಂದೇಶ ಕಳುಹಿಸಿ ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಗುಜರಾತಿನ ಅಹಮದಾಬಾದ್ ಪೊಲೀಸರು ಚೆನ್ನೈಯ ಆರೋಪಿ ಇಂಜಿನಿಯರ್ ಯುವತಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

‘ಈ ಹಿನ್ನೆಲೆಯಲ್ಲಿ ಉಡುಪಿ ಶಾಲೆಯ ಬಾಂಬ್ ಬೆದರಿಕೆ ಪ್ರಕರಣದ ತನಿಖೆಗಾಗಿ ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ನಮ್ಮ ಕಸ್ಟಡಿಗೆ ನೀಡುವಂತೆ ಅಹಮದಾಬಾದ್ ಪೊಲೀಸರಿಗೆ ಪತ್ರ ಬರೆಯಲಾಗುವುದು. ಅವರ ತನಿಖೆ ಮುಗಿದ ಬಳಿಕ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ. ಅದರಂತೆ ಉಡುಪಿಯ ಪ್ರಕರಣದ ತನಿಖೆಯನ್ನು ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಇಂಜಿನಿಯರ್ ಯುವತಿ ಬಂಧನ

ಅಹಮದಾಬಾದ್‌ನ ಜಿನೀವಾ ಲಿಬರಲ್ ಸ್ಕೂಲ್‌ಗೆ ಬಂದ ಬೆದರಿಕೆಯ ಈಮೇಲ್ ಹಿನ್ನೆಲೆಯಲ್ಲಿ ವಿಷ್ಣುಬಾಯ್ ಚಮಬಾಯ್ ಖಾಖಾದಿಯ ಎಂಬವರು ಅಹಮದಾಬಾದ್ ಸಿಟಿ ಪೊಲೀಸ್‌ನ ಸೈಬರ್ ಕ್ರೈಮ್ ಶಾಖೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಲಾಗಿತು.

ಸೈಬರ್ ಕ್ರೈಮ್ ಬ್ರಾಂಚ್ ತನಿಖಾ ತಂಡ ಜೂ.3ರ ಬೆಳಗ್ಗೆ 10.58ಕ್ಕೆ ಸಂಸ್ಥೆಗೆ ಬಂದ ಈಮೇಲ್‌ನ ತಾಂತ್ರಿಕ ವಿಶ್ಲೇಷಣೆ, ಸೈಬರ್ ಟೂಲ್ ಹಾಗೂ ಮಾನವ ಬುದ್ಧಿಮತ್ತೆಯನ್ನು ಬಳಸಿ ಈಮೇಲ್ ತಮಿಳುನಾಡಿನ ಚೆನ್ನೈನಿಂದ ಬಂದಿರುವುದನ್ನು ಪತ್ತೆ ಹಚ್ಚಿದರು. ಕೊನೆಗೆ ರೀನಿ ಜೋಸಿಲ್ಡಾ ಎಂಬ ಯುವತಿ ಈಮೇಲ್‌ನ ಸೃಷ್ಟಿಕರ್ತೆ ಎಂಬುದನ್ನು ಕಂಡುಹಿಡಿದರು.

ಈ ಬಗ್ಗೆ ಬಲವಾದ ಪುರಾವೆಗಳನ್ನು ಸಂಗ್ರಹಿಸಿದ ಗುಜರಾತ್ ಪೊಲೀಸರು ತನಿಖಾ ತಂಡವನ್ನು ಚೆನ್ನೈಗೆ ಕಳುಹಿಸಿ ಆರೋಪಿ ಯುವತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಆರೋಪಿ ಯುವತಿ ಇಲೆಕ್ಟ್ರಿಕಲ್ ಇಂಜಿನಿಯರ್ ಆಗಿದ್ದು, ಚೆನ್ನೈನ ಎಂಎನ್‌ಸಿ ಕಂಪೆನಿಯೊಂದರಲ್ಲಿ ಹಿರಿಯ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವುದು ತನಿಖೆ ವೇಳೆ ಗೊತ್ತಾಗಿದೆ. ಈಕೆ 2022ರಿಂದಲೇ ಫೇಕ್ ಈಮೈಲ್ ಅಕೌಂಟ್ ಹಾಗೂ ಫೇಕ್ ಸೋಷಿಯಲ್ ಮೀಡಿಯಾ ಪ್ರೊಪೈಲ್ ಮೂಲಕ ಬೆದರಿಕೆಯ ಈಮೈಲ್‌ಗಳನ್ನು ಗುಜರಾತ್ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿರುವ ಪ್ರಮುಖ ಶಾಲೆ, ಆಸ್ಪತ್ರೆ, ಸ್ಟೇಡಿಯಂ ಹಾಗೂ ಪ್ರಮುಖ ಸಂಸ್ಥೆಗಳನ್ನು ಕಳುಹಿಸುತಿರುವುದು ತನಿಖೆ ವೇಳೆ ಗೊತ್ತಾಗಿದೆ.

ಈಮೈಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಲು ಆಕೆ ಫೇಕ್ ಈಮೈಲ್ ಐಡಿ, ಫೇಕ್ ವಿಪಿಎನ್‌ಗಳು, ವರ್ಚುವಲ್ ನಂಬರ್ಸ್‌ ಹಾಗೂ ಡಾರ್ಕ್ ವೆಬ್ ಟೂಲ್‌ಗಳನ್ನು ಬಳಸುತಿದ್ದಳು ಎಂದು ತಿಳಿದುಬಂದಿದೆ.

ಒಟ್ಟು 21 ಬೆದರಿಕೆಯ ಈಮೈಲ್‌ಗಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ. ಇವುಗಳನ್ನು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ರಾಜಸ್ತಾನ, ತಮಿಳುನಾಡು, ದಿಲ್ಲಿ, ಕೇರಳ, ಬಿಹಾರ, ಪಂಜಾಬ್, ತೆಲಂಗಾಣ, ಹರ್ಯಾಣ, ಮಧ್ಯಪ್ರದೇಶಗಳಿಗೆ ಕಳುಹಿಸಲಾಗಿದೆ. ಗುಜರಾತ್‌ನ ಜಿನೀವಾ ಲಿಬಲರ್ ಸ್ಕೂಲ್ ಅಲ್ಲದೇ ಮೊಟೇರಾದ ನರೇಂದ್ರ ಮೋದಿ ಸ್ಟೇಡಿಯಂಗೂ ಬೆದರಿಕೆ ಈಮೈಲ್ ಹೋಗಿವೆ ಎಂದು ಗುಜರಾತ್ ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್‌ನ ಜಂಟಿ ಪೊಲೀಸ್ ಕಮಿಷನರ್ ಶರದ್ ಸಿಂಘಲ್, ಡಿಸಿಪಿ ಲವಿನಾ ಸಿನ್ಹಾ ಹಾಗೂ ಎಸಿಪಿ ಹಾರ್ದಿಕ್ ಮಕಾಡಿಯಾ ನೇತೃತ್ವದಲ್ಲಿ ಗುಜರಾತ್ ಪೊಲೀಸರು ಈ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X